More

    ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನ ಮೌಲ್ಯ ತಿಳಿಸಿ

    ಹೂವಿನಹಡಗಲಿ: ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜತೆಗೆ ಜೀವನದ ಮೌಲ್ಯಗಳನ್ನು ಹೆಚ್ಚಾಗಿ ತಿಳಿಸಬೇಕು ಎಂದು ಬಿಇಒ ಮಹೇಶ್ ವಿ. ಪೂಜಾರ್ ಹೇಳಿದರು.

    ಇದನ್ನೂ ಓದಿ: ನನ್ನ ವೃತ್ತಿಜೀವನದ ಅತ್ಯುತ್ತಮ ಪಾತ್ರವಿದು: ನಟಿ ಮೃಣಾಲ್​ ಠಾಕೂರ್

    ಪಟ್ಟಣದ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ತರುಣ ಸಂಘದಿಂದ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಪಾಲಕರು ಮಕ್ಕಳು ಪರೀಕ್ಷೆಯಲ್ಲಿ ಪಡೆದ ಅಂಕಗಳಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಆದರೆ ಮಕ್ಕಳಿಗೆ ಜೀವನ ಕೌಶಲ್ಯದ ಜತೆಗೆ ಸಾಮಾನ್ಯ ಜ್ಞಾನವನ್ನು ಕಲಿಸಲು ವಿಫಲರಾಗುತ್ತಿದ್ದಾರೆ. ನಗರ ಪ್ರದೇಶದಲ್ಲಿನ ವಾತಾವರಣದಿಂದ ಸಂಬಂಧಗಳ ನಡುವಿನ ಬಾಂಧವ್ಯ ಮರೆಯುತ್ತಿದ್ದಾರೆ.

    ವಿದ್ಯಾರ್ಥಿಗಳು ಅಂಕಗಳನ್ನು ಗಳಿಸಲು ಪೈಪೋಟಿ ನಡೆಸುತ್ತಿದ್ದಾರೆ. ಬಡತನದಲ್ಲಿ ಸಾಧನೆ ಮಾಡಿದ ಅನೇಕ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದರು.

    ಕಸಾಪ ತಾಲೂಕು ಅಧ್ಯಕ್ಷ ಟಿ.ವೀರೇಂದ್ರ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯದ ಅಧ್ಯಯನ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸುವ ಮೂಲಕ ಕನ್ನಡವನ್ನು ಶ್ರೀಮಂತ ಗೊಳಿಸಲು ಎಲ್ಲರು ಮುಂದಾಗಬೇಕು ಎಂದರು.

    ತಾಲೂಕಿನ ಎಲ್ಲ ಶಾಲೆಗಳಲ್ಲಿ ಅತಿಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಸನ್ಮಾನಿಸಲಾಯಿತು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಸಂಘದ ಅಧ್ಯಕ್ಷ ಅಟವಾಳಗಿ ಕೊಟ್ರೇಶ್, ಉಪಾಧ್ಯಕ್ಷೆ ಎಂ.ಪಿ.ಸುಮಾ ವಿಜಯ್, ಕಾರ್ಯದರ್ಶಿ ಸಿ.ಕೆ.ಎಂ.ಬಸವಲಿಂಗಸ್ವಾಮಿ,

    ಹಿರೇಮಲ್ಲಕೆರಿ ಮಠದ ಚನ್ನಬಸವ ಸ್ವಾಮೀಜಿ, ಗುಡ್ಡದ ಆನ್ವೇರಿ ಮಠದ ಶಿವಯೋಗೀಶ್ವರ ಸ್ವಾಮೀಜಿ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ, ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಶಿವಲಿಂಗಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts