ಬೆಳಗಾವಿ: ಪರಿಹಾರಕ್ಕಾಗಿ ಅಹೋರಾತ್ರಿ ಧರಣಿ

Latest News

ನಷ್ಟ ಕಡಿಮೆ ಮಾಡಿದರೆ ಲಾಭ ಸಾಧ್ಯ

ಕೊಪ್ಪಳ: ದಾಳಿಂಬೆ ಬೆಳೆಯಲ್ಲಿ ರೈತರು ಶೇ.35 ನಷ್ಟ ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಂಡಲ್ಲಿ ಹೆಚ್ಚಿನ ಆದಾಯ ಪಡೆಯಬಹುದೆಂದು ಭಾರತೀಯ ದಾಳಿಂಬೆ ಬೆಳೆಗಾರರ ಸಂಘದ...

ಜನಜಾಗೃತಿ ಅಭಿಯಾನಕ್ಕೆ ಅಭಿನವ ಗವಿಶ್ರೀ ಚಾಲನೆ

ಕಾರಟಗಿ: ಪಟ್ಟಣದಲ್ಲಿ ಜೆಸ್ಕಾಂನಿಂದ ಹಮ್ಮಿಕೊಂಡಿದ್ದ ವಿದ್ಯುತ್ ಅಪಾಯಗಳನ್ನು ತಪ್ಪಿಸುವ ಸುರಕ್ಷತಾ ಜನಜಾಗೃತಿ ಅಭಿಯಾನಕ್ಕೆ ಗವಿಮಠದ ಅಭಿನವ ಗವಿಶ್ರೀಗಳು ಬುಧವಾರ ಚಾಲನೆ ನೀಡಿದರು. ಜೆಸ್ಕಾಂನ ಇಇ...

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಬೆಳಗಾವಿ: ನದಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಉಂಟಾಗಿರುವ ಬೆಳೆ, ಮನೆ ಮತ್ತು ಜೀವ ಹಾನಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸೋಮವಾರ ಬೆಳಗಾವಿಯ ಅಶೋಕ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ರೈತರು, ನೆರೆ ಸಂತ್ರಸ್ತರು ಬಾರಕೋಲು ಚಳವಳಿ ನಡೆಸಿದರು.
ಜಿಲ್ಲಾಕಾರಿ ಕಚೇರಿಗೆ ಮುತ್ತಿಗೆ ಹಾಕಿ ಅಹೋರಾತ್ರಿ ಧರಣಿ ಆರಂಭಿಸಿದ ರೈತರು ಹಾಗೂ ಸಂತ್ರಸ್ತರು, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದಾಗಿ ಸುಮಾರು 2.24 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದೆ. 1 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಈವರೆಗೆ ಸೂಕ್ತ ಪರಿಹಾರ ನೀಡುತ್ತಿಲ್ಲ. ಬದಲಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಪ್ರವಾಹ ಮತ್ತು ಮಳೆಯಿಂದ ಹಾನಿಯಾದ ಪ್ರದೇಶದಲ್ಲಿ ಎಕರೆ ಕಬ್ಬಿಗೆ ಕನಿಷ್ಠ 1.50 ಲಕ್ಷ ರೂ. ಹಾಗೂ ಇತರೆ ಬೆಳೆಗಳ ಹಾನಿಗೆ ಪ್ರತಿ ಎಕರೆಗೆ 1 ಲಕ್ಷ ರೂ.ಪರಿಹಾರ ನೀಡಬೇಕು. ಅಲ್ಲದೆ ಬೆಳೆಹಾನಿಗೆ ಒಳಗಾದ ರೈತರು ವಿವಿಧ ಬ್ಯಾಂಕ್‌ಗಳಲ್ಲಿ ಮಾಡಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಹೊಸ ಸಾಲ ನೀಡಬೇಕು. ಮಳೆಯಾಶ್ರಿತ ರೈತರಿಗೆ ಉಚಿತ ಗೊಬ್ಬರ ಮತ್ತು ಬಿತ್ತನೆ ಬೀಜ ನೀಡಬೇಕು ಎಂದು ಆಗ್ರಹಿಸಿದರು.

ಪರಿಹಾರದ ಮೊತ್ತ ಹೆಚ್ಚಿಸಿ: ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗಳಿಗೆ 15 ಲಕ್ಷ ರೂ., ಅರ್ಧದಷ್ಟು ಹಾನಿಯಾದ ಮನೆಗಳಿಗೆ 10 ಲಕ್ಷ ರೂ. ಹಾಗೂ ಹಸು, ಎತ್ತು, ಎಮ್ಮೆಗಳ ಸಾವಿಗೆ ತಲಾ 80 ಸಾವಿರ ರೂ.ಪರಿಹಾರ ನೀಡಬೇಕು. ತೋಟಗಾರಿಕೆ ಬೆಳೆಗಳಿಗೆ 2 ಲಕ್ಷ ರೂ. ಹಾಗೂ ಮೇಕೆ, ಕುರಿಗಳ ಹಾನಿಗೆ 25 ಸಾವಿರ ರೂ., ಪ್ರವಾಹದಲ್ಲಿ ಜೀವ ಕಳೆದುಕೊಂಡವರಿಗೆ 15 ಲಕ್ಷ ರೂ.ಪರಿಹಾರ ನೀಡಬೇಕು. ಅತಿವೃಷ್ಟಿ, ಅನಾವೃಷ್ಟಿ ಯಿಂದ ತತ್ತರಿಸಿರುವ ರೈತರು ಬೆಳೆ ಹಾಗೂ ಹೈನುಗಾರಿಕೆಗೆ ಟ್ರಾಕ್ಟರ್ ಖರೀಸಿದ್ದು, ಅದರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಸಾಲ ವಸೂಲಾತಿ ನಿಲ್ಲಬೇಕು. ಮಹಿಳಾ ಸ್ವಸಹಾಯ ಸಂಘ ಹಾಗೂ ಪನಾನ್ಸ್‌ಗಳ ಸಾಲ ಮನ್ನಾ ಮಾಡಬೇಕು. ಬೆಳೆ ವಿಮಾ ಕಂಪನಿಗಳಿಂದ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ, ಜಯಶ್ರೀ ಗುರನ್ನವರ, ಅಶೋಕ ಯಮಕನಮರಡಿ, ಸೋಮು ರೈನಾಪುರ, ಮಂಜು ಗದಾಡಿ, ಜಾವೀದ್ ಮುಲ್ಲಾ, ಮಲ್ಲಪ್ಪ ಅಂಗಡಿ, ಈರಣ್ಣ ಸಸಾಲಟ್ಟಿ, ಗೂಳಪ್ಪ ಬಾವಿಕಟ್ಟಿ, ಶಿವಾನಂದ ದೊಡವಾಡ ಹಾಗೂ ರೈತರು, ರೈತ ಮುಖಂಡರು, ರೈತ ಮಹಿಳೆಯರು, ಇತರರು ಇದ್ದರು.

ಧರಣಿ ವಾಪಸ್ ಪಡೆಯುವುದಿಲ್ಲ

ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಹಣ ರೈತರ ಖಾತೆಗಳಿಗೆ ಜಮಾ ಆಗಿಲ್ಲ. ರೈತರು ಬೆಳೆ ಹಾನಿ ಅನುಭವಿಸಿದರೂ ವಿಮಾ ಪರಿಹಾರ ನೀಡುವ ಬದಲು ಸಮೀಕ್ಷೆ ಮಾಡಬೇಕೆಂದು ನೆಪ ಹೇಳುತ್ತ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಕೂಡಲೇ ವಿಮಾ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಅಲ್ಲಿಯವರೆಗೆ ಅಹೋರಾತ್ರಿ ಧರಣಿ ವಾಪಸ್ ಪಡೆಯುವುದಿಲ್ಲ ಎಂದು ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾದಿಕಾರಿ ಕಚೇರಿಗೆ ಮುತ್ತಿಗೆ

ಬೆಳಗಾವಿ ಜಿಲ್ಲಾದಿಕಾರಿ ಕಚೇರಿ ಆವರಣದಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸಲು ಪೊಲೀಸರು ಹಾಗೂ ಜಿಲ್ಲಾಡಳಿತ ಅವಕಾಶ ನೀಡದ್ದರಿಂದ ರೈತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಕೆಲ ರೈತರು ಕಚೇರಿಗೆ ನುಗ್ಗಿ ಗಲಾಟೆ ನಡೆಸಿದರು. ಇದಕ್ಕೆ ಮಣಿದ ಜಿಲ್ಲಾಡಳಿತ ಪ್ರತಿಭಟನೆಗೆ ಅವಕಾಶ ಕಲ್ಪಿಸಿಕೊಟ್ಟಿತು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...