More

    ಅಲ್ಪಸಂಖ್ಯಾತರ ಕಾಲನಿಗಳ ಸಮಗ್ರ ಅಭಿವೃದ್ಧಿಗೆ ಬದ್ದ

    ಕಡೂರು: ಕಡೂರು-ಬೀರೂರು ಪಟ್ಟಣ ಪ್ರದೇಶದ ಅಲ್ಪಸಂಖ್ಯಾತರ ಕಾಲನಿಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
    ಶುಕ್ರವಾರ ಕನಕ ವೃತ್ತದ ಮಸೀದಿ ಮುಂಭಾಗದ ಹಾಗೂ 14ನೇ ವಾರ್ಡ್‌ನ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2023-24ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೂಲಭೂತ ಸೌಲಭ್ಯ ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
    ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ 5 ಕೋಟಿ ರೂ. ಹಾಗೂ ಮಸೀದಿಗಳ ಅಭಿವೃದ್ಧಿಗಾಗಿ 2.15 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಇಲಾಖೆಯಿಂದ ಇಷ್ಟು ದೊಡ್ಡಮಟ್ಟದ ಅನುದಾನ ಹಿಂದೆ ಎಂದೂ ಬಂದಿರಲಿಲ್ಲ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ ಅನುದಾನ ತರಲಾಗುವುದು. ನನ್ನ ಗೆಲುವಿಗೆ ಶ್ರಮಿಸಿದ ಅಲ್ಪಸಂಖ್ಯಾತ ಸಮಾಜದ ಅಭಿವೃದ್ಧಿಗೆ ಶ್ರಮಿಸಲಾಗುತ್ತದೆ.
    ಎಲ್ಲಾ ವರ್ಗಗಳ ಹಿತವನ್ನು ಕಾಪಾಡಲು ಆಯಾ ಇಲಾಖೆಗಳಿಂದ ಅನುದಾನ ತರಲಾಗಿದೆ. ಪೂರ್ಣ ಪ್ರಮಾಣದ ಬಜೆಟ್ ನಂತರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುವುದು. ರಸ್ತೆ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಗೆ 40 ಕೋಟಿ ರೂ. ಅನುದಾನ ಮಂಜೂರಾಗಿದ್ದು. ಈಗಾಗಲೇ ಆಡಳಿತಾತ್ಮಕವಾಗಿ ಮಂಜೂರಾತಿ ದೊರಕಿದೆ. ಎರಡನೇ ಹಂತದಲ್ಲಿ ಅಲ್ಪಸಂಖ್ಯಾತರ ಇಲಾಖೆಯಿಂದ ಹೆಚ್ಚಿನ ಅನುದಾನ ತರುವ ಮೂಲಕ ಕಾಲನಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಈ ಎಲ್ಲಾ ಕಾಮಗಾರಿಗಳು ಶೀಘ್ರ ಮುಗಿಯಲಿದೆ. ಕಡೂರು-ಬೀರೂರು ಪುರಸಭೆಗಳಿಗೆ ತಲಾ 5 ಕೋಟಿ ರೂ.ವಿಶೇಷ ಅನುದಾನ ತರುವ ಮೂಲಕ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀ ಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts