25.9 C
Bengaluru
Wednesday, January 22, 2020

ಸ್ಥಿರ ಆಡಳಿತಕ್ಕಾಗಿ ಕಮಲ ಪಾಳಯ ಸೇರಿದೆ- ರಮೇಶ ಜಾರಕಿಹೊಳಿ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಗೋಕಾಕ: ಕಾಂಗ್ರೆಸ್ ವಿರುದ್ಧ ನಾನಾ ಕಾರಣಗಳಿಂದಾಗಿ ಬಂಡೆದ್ದರಿಂದ ಸ್ಥಿರ ಆಡಳಿತಕ್ಕಾಗಿ ಬಿಜೆಪಿ ಸೇರಬೇಕಾಯಿತು. ನಾನು ತೆಗೆದುಕೊಂಡ ರಾಜಕೀಯ ನಿರ್ಣಯಕ್ಕೆ ಕ್ಷೇತ್ರದ ಮತದಾರರು ಸರ್ವಾನುಮತದಿಂದ ಒಪ್ಪಿಗೆ ನೀಡಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಬುಧವಾರ ತಾಲೂಕಿನ ಮೇಲ್ಮಟ್ಟಿ, ಕುಂದರಗಿ ಗ್ರಾಮಗಳಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್‌ನ ಸರ್ವಾಧಿಕಾರತ್ವಕ್ಕೆ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದೆ. ಸ್ಪೀಕರ್ ಕಾನೂನು ಬಾಹಿರವಾಗಿ ನಮ್ಮನ್ನು ಅನರ್ಹಗೊಳಿಸಿದ್ದರಿಂದ ಕಾನೂನು ಹೋರಾಟಕ್ಕೆ ಇಳಿಯಬೇಕಾಯಿತು. ಇದರಿಂದ ವಿರೋಧಿಗಳು ಇನ್ನೇನು ರಮೇಶ ಜಾರಕಿಹೊಳಿ ಅವರ ರಾಜಕೀಯ ಜೀವನ ಮುಗಿಯಿತು ಎಂದು ಹೇಳಿತ್ತಾ ಜನರಿಗೆ ತಪ್ಪು ಸಂದೇಶ ನೀಡಿ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಉಪಚುನಾವಣೆಯ ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಮುಂದುವರಿಯಬೇಕು. ಅವರ ಕೈ ಬಲಪಡಿಸಲು ಹಾಗೂ ಕ್ಷೇತ್ರದ ಪ್ರಗತಿಗಾಗಿ ಬಿಜೆಪಿಗೆ ಮತ ನೀಡಬೇಕು. ಬಿಎಸ್‌ವೈ ಇಳಿ ವಯಸ್ಸಿನಲ್ಲೂ ರಾಜ್ಯದ ವಿಕಾಸಕ್ಕೆ ಮತ್ತು ಜನರ ಏಳ್ಗೆಗಾಗಿ ಶ್ರಮಿಸುತ್ತಿರುವ ಕಾಯಕಯೋಗಿ ಎಂದು ಪ್ರಸಂಸೆ ವ್ಯಕ್ತಪಡಿಸಿದರು.
ಕಮಲಕ್ಕೆ ಓಟ್ ನೀಡಿ: ಪ್ರತಿ ಬಾರಿ ನಾನು ಕಾಂಗ್ರೆಸ್‌ನ ಹಸ್ತ ಚಿಹ್ನೆ ಬಳಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೆ. ಸದ್ಯ ನಾನು ಬಿಜೆಪಿಗೆ ಸೇರ್ಪಡೆಯಾಗಿರುವೆ. ಅಭಿವೃದ್ಧಿ ದೃಷ್ಟಿಯಿಂದ ಪ್ರತಿ ಮತದಾರ ಕಮಲಕ್ಕೆ ಮತ ನೀಡಬೇಕು ಎಂದು ಕೋರಿದರು.

ಶ್ರೀಗಳ ಭೇಟಿ: ರಮೇಶ ಜಾರಕಿಹೊಳಿ ಅವರು ಕುಂದರಗಿಯ ಅಡವಿಸಿದ್ದೇಶ್ವರಮಠದ ಅಮರೇಶ್ವರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರಮೇಶ ಜಾರಕಿಹೊಳಿಯವರು ನಂತರ ದಾಸನಟ್ಟಿ, ಗಡ್ಡಿಹೊಳಿ, ಶೀಗಿಹೊಳಿ, ಉರುಬಿಹಟ್ಟಿ, ಬೆಣಚಿನಮರಡಿ(ಉ), ಕನಸಗೇರಿ, ಮಲೆಬೈಲ ಹಾಗೂ ಕಡಬಗಟ್ಟಿ ಗ್ರಾಮಗಳಿಗೆ ತೆರಳಿ ಪಾದಯಾತ್ರೆ ಮೂಲಕ ಮತಯಾಚಿಸಿದರು. ಮುಸ್ಲಿಮರು ರಮೇಶ ಜಾರಕಿಹೊಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾನಂದ ಡೋಣಿ, ಭೀಮಗೌಡ ಪೊಲೀಸ್ ಪಾಟೀಲ, ಅಡಿವೆಪ್ಪ ನಾವಲಗಟ್ಟಿ, ಶಿವಾನಂದ ತೋಟಗೇರ, ರಾಜು ತಳವಾರ, ಬೋರಪ್ಪ ತಳವಾರ, ನಾಗಪ್ಪ ತಳವಾರ, ಯಲ್ಲಪ್ಪ ಪೂಜೇರಿ, ಅಮೀರಸಾಬ ದೇಸಾಯಿ, ದಸ್ತಗೀರಸಾಬ ದೇಸಾಯಿ, ಇಸ್ಮಾಯಿಲ ಅರಳಿಕಟ್ಟಿ, ಮಹ್ಮದಸಾಬ ದೇಸಾಯಿ, ಬಸವಣ್ಣಿ ದಾಸಗೋಳ, ಪರಸಪ್ಪ ದಾಸಗೋಳ ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...