ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ಅನುಷ್ಠಾನಗೊಳಿಸಿ

ಕಂಪ್ಲಿ: ರಾಷ್ಟ್ರೀಕೃತ ಬ್ಯಾಂಕ್, ಮೈಕ್ರೋ ಫೈನಾನ್ಸ್, ಸರ್ಕಾರಿ ಹಣಕಾಸು ಸಂಸ್ಥೆಗಳು ಸಾಲವಸೂಲಾತಿಗಾಗಿ ರೈತರಿಗೆ ನೋಟಿಸ್, ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ರೈತರ ಕೃಷಿ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ(ಜೆ.ಕಾರ್ತೀಕ ಬಣ)ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಗೋಡಿಹಾಳ್ ಒತ್ತಾಯಿಸಿದರು.

ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕು ಘಟಕದ ಸಂಘಟನಾ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಕೂಡಲೇ ರೈತರ ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ಅನುಷ್ಠಾನಗೊಳಿಸಬೇಕು. ಜೋಳ ಖರೀದಿ ಕೇಂದ್ರಕ್ಕೆ ಜೋಳ ಮಾರಾಟ ಮಾಡಿದ ರೈತರಿಗೆ ಕೂಡಲೇ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.

ತಾಲೂಕು ಘಟಕ ಅಧ್ಯಕ್ಷ ಸಿ.ಎ.ಚನ್ನಪ್ಪ ಮಾತನಾಡಿ, ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು. ಮಾರುಕಟ್ಟೆಯಲ್ಲಿ ಕಳಪೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟವಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ತುಂಗಭದ್ರಾ ನದಿಗೆ ನೂತನ ಸೇತುವೆ ನಿರ್ಮಿಸಬೇಕು. ಕೃಷಿ ಯಂತ್ರಧಾರೆ ಕೇಂದ್ರವನ್ನು ಮರು ಆರಂಭೀಸಬೇಕು ಎಂದು ಒತ್ತಾಯಿಸಿದರು.

ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಶಿವರಾಜ ಮಾರಲದಿನ್ನಿ, ಹೊಸಪೇಟೆ ತಾಲೂಕು ಅಧ್ಯಕ್ಷ ಎಲ್.ಎಸ್.ರುದ್ರಪ್ಪ, ಸಿಂಧನೂರು ತಾಲೂಕು ಅಧ್ಯಕ್ಷ ಹುಲಿಗಯ್ಯ ನಂ.10 ಮುದ್ದಾಪುರ ಗ್ರಾಪಂ ಸದಸ್ಯ ಬಳ್ಳಾರಿ ಮಾಧವ, ರೈತರಾದ ಓರ‌್ವಾಯಿ ಮಾದೇವ, ಎನ್.ವೆಂಕಟೇಶ ಇತರರಿದ್ದರು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…