20.4 C
Bangalore
Monday, December 9, 2019

ಪ್ರಜಾಪ್ರಭುತ್ವಕ್ಕಾಗಿ ಮತ ಹಾಕಿ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೆಳಗಾವಿ: ದೇಶದ ಎಲ್ಲ ನಾಗರಿಕರು ಭಾಗವಹಿಸುವ ಸಾರ್ವತ್ರಿಕ ಚುನಾವಣೆ ಕೂಡ ಒಂದು ಹಬ್ಬವಾಗಿ ಆಚರಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಲಕ್ಷ್ಮಣ ನಿಂಬರಗಿ ಕರೆ ನೀಡಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಭಾನುವಾರ ಚುನಾವಣೆ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನದ 326ರ ಪರಿಚ್ಛೇದದಲ್ಲಿ 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ. ದೇಶದಲ್ಲಿ ಧಾರ್ಮಿಕ ಹಾಗೂ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುತ್ತಾರೆ. ಅದೇ ರೀತಿ ಚುನಾವಣೆ ಹಬ್ಬದಲ್ಲಿ ಎಲ್ಲರೂ ಪಾಲ್ಗೊಂಡು ಯಶಸ್ವಿಯಾಗಿಸಬೇಕು ಎಂದರು.

ಜಿಲ್ಲಾಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾತನಾಡಿ, ಚುನಾವಣೆ ಮತ್ತು ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸುವ ಹಿನ್ನೆಲೆಯಲ್ಲಿ ಆಯೋಗವು ಸೆ.1ರಿಂದ ಅಕ್ಟೋಬರ್ 15ರವರೆಗೆ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯ ನಡೆಯಲಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ಮತದಾನದಂದು ನಮ್ಮ ಹೆಸರು ಇಲ್ಲ ಎಂಬ ದೂರುಗಳು ಕೇಳಿಬರುತ್ತವೆ. ಮತದಾರರು ಜಾಗ್ರತೆ ವಹಿಸಿದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಮುಂಚಿತವಾಗಿಯೇ ಸರಿಪಡಿಸಬಹುದು. ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯ ನಡೆಯಲಿದ್ದು, ಪ್ರತಿಯೊಬ್ಬರೂ ತಮ್ಮ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಲೋಪದೋಷಗಳಿದ್ದರೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರಿಪಡಿಸಬಹುದು ಎಂದರು.

ಪ್ರಚಾರ ರಾಯಭಾರಿ ರಾಘವೇಂದ್ರ ಅಣ್ವೇಕರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಅಪರ ಜಿಲ್ಲಾಕಾರಿ ಡಾ. ಎಚ್.ಬಿ.ಬೂದೆಪ್ಪ, ಉಪವಿಭಾಗಾಕಾರಿ ಡಾ.ಕವಿತಾ ಯೋಗಪ್ಪನವರ, ಹೆಚ್ಚುವರಿ ಅಪರ ಜಿಲ್ಲಾಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ದಿನೇಶಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಪಂ ಮುಖ್ಯ ಲೆಕ್ಕಾಕಾರಿ ಪರಶುರಾಮ ದುಡಗುಂಟಿ ಹಾಗೂ ಮತದಾರರ ಸಾಕ್ಷರತಾ ಕ್ಲಬ್ ಪದಾಕಾರಿಗಳು, ವಿದ್ಯಾರ್ಥಿಗಳು, ನೋಂದಾಯಿತ ರಾಜಕೀಯ ಪಕ್ಷಗಳ ಪದಾಕಾರಿಗಳು, ಇತರರು ಇದ್ದರು.

ದೇಶದ ಭವಿಷ್ಯ ರೂಪಿಸಲು ಮುಂದಾಗಿ

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಹಾಗೂ ಹೆಸರು ತಪ್ಪದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮತ್ತು ಹೊಣೆಗಾರಿಕೆ. ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ಮೂಲಕವು ಪರಿಶೀಲನೆಗೆ ಅವಕಾಶವಿರುವುದರಿಂದ ಎಲ್ಲರೂ ಮತದಾನದ ಮೂಲಕ ದೇಶದ ಭವಿಷ್ಯ ರೂಪಿಸಲು ಕೈಜೋಡಿಸಬೇಕು ಎಂದು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ್ ಕರೆ ನೀಡಿದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...