More

    ರೈತರಿಗೆ ಬೀಜ ವಿತರಣೆ

    ನಿಪ್ಪಾಣಿ: ತಾಲೂಕಿನಲ್ಲಿ 7 ಉಪ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಿಸಲಾಗುತ್ತಿದ್ದು, ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು. ಎಲ್ಲ ಕಡೆ ರಸಗೊಬ್ಬರ ಮತ್ತು ಕೀಟನಾಶಕ ದಾಸ್ತಾನು ಮಾಡಿಕೊಳ್ಳುವ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ರೈತರು ನಿರ್ಭಯವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೃಷಿ ಇಲಾಖೆಯ ಚಿಕ್ಕೋಡಿ ವಿಭಾಗದ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ ಮಾತನಾಡಿ, ಸ್ಥಳೀಯ ಹೋಬಳಿ ಮಟ್ಟದಲ್ಲಿ ಸುಮಾರು 4500 ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್ ಬಿತ್ತನೆ ಮಾಡಲಾಗುತ್ತದೆ. ಅದರಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಬೀಜ ಪಡೆಯಬಹುದು. ನಿಪ್ಪಾಣಿ ನಗರ ಹೋಬಳಿಯ ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಹಾಗೂ ಕುರ್ಲಿ, ಆಡಿ, ಬೆನಾಡಿ, ಸೌಂದಲಗಾ ಹಾಗೂ ಬೂದಿಹಾಳ ಗ್ರಾಮಗಳ ಪಿಕೆಪಿಎಸ್ ಮೂಲಕ ಬೀಜ ವಿತರಣೆ ಮಾಡಲಾಗಿದೆ ಎಂದರು. ಸಂಸದ ಅಣ್ಣಾಸಾಹೇಬ ಜೊಲ್ಲೆ, ಸ್ಥಳೀಯ ಕೃಷಿ ಅಧಿಕಾರಿ ಪುರುಷೋತ್ತಮ ಪಿರಾಜೆ, ಬಿ.ಎಸ್. ಯಾದವಾಡ, ವೈ.ಕೆ. ಹೊಸಮನಿ, ಎಸ್.ಡಿ. ಚೌನಾಯಿಕ, ಎಸ್.ಎಸ್. ರಾನವಗೋಳ ಹಾಗೂ ನಗರಸಭೆ ಸದಸ್ಯರು, ತಾಪಂ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts