ಭವಿಷ್ಯದ ಕೌಶಲಗಳಿಗೆ ಆದ್ಯತೆ ಅತ್ಯಗತ್ಯ

blank

ಬೆಳಗಾವಿ: ಭವಿಷ್ಯದ ಕೌಶಲಗಳಿಗೆ ಒತ್ತು ನೀಡಿದಲ್ಲಿ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಜಿಲ್ಲೆಯವರಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಇ.ವಿ. ರಮಣರೆಡ್ಡಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕೌಶಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ನೀಡುವ ಮೂಲಕ ಕೌಶಲಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು ಎಂದು ಸೂಚಿಸಿದರು.

ದೇಶದ ತಳಮಟ್ಟವನ್ನು ತಲುಪಲು ಮತ್ತು ಪ್ರತಿಯೊಬ್ಬರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕೌಶಲ ಅಭಿವೃದ್ಧಿ ಅವಕಾಶಗಳ ವ್ಯವಸ್ಥೆ ಬಲಪಡಿಸಲಾಗುತ್ತಿದೆ. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ಕೌಶಲ ಸಮಿತಿಗಳನ್ನು ರಚನೆ ಮಾಡಲಾಗಿದೆ. ವಿವಿಧ ಕೌಶಲಾಭಿವೃದ್ಧಿ ಸಂಬಂಧಿಸಿದ ಯೋಜನೆಗಳನ್ನು ಪ್ರಾರಂಭಿಸಿದೆ. ಕೌಶಲ ಅಭಿವೃದ್ಧಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕರ್ನಾಟಕ ಕೌಶಲಾಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದರು.

ವಿವಿಧ ಕಂಪನಿಗಳ ಎಚ್‌ಆರ್ ಆಹ್ವಾನಿಸಿ: ಮಾರಾಟ, ಪ್ರಚಾರಕ್ಕೆ ಸಂಬಂಧಿಸಿದಂತೆ ಎಂಬಿಎ ಪದವಿ ಹೊಂದಿರುವ ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು. ವಿವಿಧ ಕಂಪನಿಗಳಲ್ಲಿ ಸಾಕಷ್ಟು ಉದ್ಯೋಗಗಳಿವೆ. ಅದರ ಬೇಡಿಕೆಯಂತೆ ಸಾಕಷ್ಟು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅನುಭವದ ಕೊರತೆ ಎದುರಾಗುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ವಿವಿಧ ಕಂಪನಿಗಳ ಎಚ್‌ಆರ್‌ಗಳನ್ನು ಸಭೆಗೆ ಆಹ್ವಾನಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು. ಜಿಪಂ ಸಿಇಒ ರಾಹುಲ್ ಶಿಂಧೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ ಪೈ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ ಮಿರಜನ್ನವರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ವ್ಯವಸ್ಥಾಪಕ ಡಾ.ಸಂಜೀವ ತಿಗಣಿ ಇತರರಿದ್ದರು.

Share This Article

ಉಡುಗೆಗೆ ಮ್ಯಾಚ್​ ಆಗುವ ಲಿಪ್​ಸ್ಟಿಕ್​​​ ಆಯ್ಕೆ ಮಾಡುವುದೇಗೆ?; ಇಲ್ಲಿದೆ ಸಿಂಪಲ್​ ಟಿಪ್ಸ್​​ | Beauty Tips

ನಾವು ಮದುವೆಗೆ ಚೆಂದದ ಬಟ್ಟೆಗಳನ್ನು ಆಯ್ಕೆ ಮಾಡುತ್ತೇವೆ. ಆದ್ದರಿಂದ ಯಾರೂ ನಮಗಿಂತ ಹೆಚ್ಚು ಸುಂದರವಾಗಿ ಕಾಣುವುದಿಲ್ಲ.…

ಚಳಿಗಾಲದಲ್ಲಿ ವಿಟಮಿನ್​​ ಡಿ ಕೊರತೆಯೇ?; ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ | Health Tips

ಚಳಿಗಾಲದಲ್ಲಿ ಸೂರ್ಯನ ಬೆಳಕಿನ ಕೊರತೆಯಿಂದ ವಿಟಮಿನ್ ಡಿ ಕೊರತೆ ಉಂಟಾಗುತ್ತದೆ. ಆದರೆ ಈ ಪೋಷಕಾಂಶವು ಅನೇಕ…

Mushrooms for Cancer: ಅಣಬೆ ತಿಂದರೆ ಯಾವುದೇ ಕ್ಯಾನ್ಸರ್ ಇದ್ರು ಕಂಟ್ರೋಲ್…!

Mushrooms for Cancer : ಕ್ಯಾನ್ಸರ್ ರೋಗ ಅಪಾಯಕಾರಿ. ಕ್ಯಾನ್ಸರ್ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಕ್ಯಾನ್ಸರ್​​ನಲ್ಲಿ…