ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ರೇಷ್ಮಾ ಬೇಗಂ ಆಯ್ಕೆ

blank

ಅಳವಂಡಿ: ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಯೋಗಪಟು ರೇಷ್ಮಾ ಬೇಗಂ ವಡ್ಡಟ್ಟಿ ಆಯ್ಕೆಯಾಗಿದ್ದಾರೆ.


ಗಣರಾಜ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಯೋಗ ಪ್ರದರ್ಶನ ನೀಡಲಿದ್ದಾರೆ. ರಾಜ್ಯದಿಂದ ಒಟ್ಟು 18 ಜನ ಯೋಗ ತರಬೇತುದಾರರನ್ನು ರಾಜ್ಯ ಆಯುಷ್ ಇಲಾಖೆ ಆಯುಕ್ತರು ನಾಮನಿರ್ದೇಶನ ಮಾಡಿದ ಪಟ್ಟಿ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದಾರೆ. ರೇಷ್ಮಾ ಬೇಗಂ ವಡ್ಡಟ್ಟಿ ಕೊಪ್ಪಳ ತಾಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಆಸ್ಪತ್ರೆಯಲ್ಲಿ ಯೋಗ ಶಿಕ್ಷಕಿ ಹಾಗೂ ತರಬೇತಿದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ವಿಶ್ವ ವಿದ್ಯಾಲಯದಲ್ಲಿ ಯೋಗದಲ್ಲಿ ಉನ್ನತ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಯೋಗಾಭ್ಯಾಸದಲ್ಲಿ ತೊಡಗಿದ್ದು, ಹಲವು ಪ್ರಶಸ್ತಿ ಹಾಗೂ ಪುರಸ್ಕಾರ ಪಡೆದಿದ್ದಾರೆ.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…