More

    ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅಗತ್ಯ: ದೇವೇಂದ್ರ ಪಂಡಿತ್ ಅನಿಸಿಕೆ

    ಯಲಬುರ್ಗಾ: ಕಾನೂನಿನ ಅರಿವು ಎಲ್ಲರಿಗೂ ಅಗತ್ಯವಿದ್ದು, ವಿದ್ಯಾರ್ಥಿಗಳು ಅದನ್ನು ತಿಳಿದುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಹೇಳಿದರು.


    ತಾಲೂಕಿನ ಗಾಣಧಾಳ ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾನೂನು ಸೇವಾ ಸಮಿತಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ನೆರವು ಸಿಗಬೇಕು. ಕಾನೂನಿನ ಜ್ಞಾನದ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸೌಲಭ್ಯ ವಂಚಿತರಿಗೆ ಕಾನೂನಿನ ಅರಿವು ಅಗತ್ಯವಿದೆ ಎಂದರು.

    ಇದನ್ನೂ ಓದಿ: ಪ್ರತಿಯೊಬ್ಬರಿಗೆ ಕಾನೂನಿನ ಅರಿವು ಅಗತ್ಯ: ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್. ರಘುನಾಥ್


    ಹಿರಿಯ ವಕೀಲ ಮಲ್ಲನಗೌಡ ಪಾಟೀಲ್ ಪೋಕ್ಸೊ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ವಕೀಲ ಭರಮಗೌಡ ಪೊಲೀಸ್ ಪಾಟೀಲ್, ಎಎಸ್‌ಐ ಮೆಹಬೂಬ್, ಗಣ್ಯರಾದ ನಿಂಗಪ್ಪ ಚಕ್ರಸಾಲಿ, ವಿನೋದ್ ಗೋಟೂರು, ಮಲ್ಲಿಕಾರ್ಜುನ ಬಡಿಗೇರ, ಮಲ್ಲಿಕಾರ್ಜುನ ಬಳಗೇರಿ, ದೇವಪ್ಪ ಪೊಲೀಸ್ ಪಾಟೀಲ್, ನಾಗರಾಜ, ಹುಲುಗಪ್ಪ ಕೊಪ್ಪಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts