More

    ಉಪ ಚುನಾವಣೆಗೆ ಸಕಲ ಸಿದ್ಧತೆ – ನಳಿನಕುಮಾರ ಕಟೀಲ್

    ಚಿಕ್ಕೋಡಿ: ಭೌಗೋಳಿಕವಾಗಿ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆ ವಿಭಜಿಸುವುದು ಅನಿವಾರ್ಯ. ಆದರೆ, ಕೆಲ ತೊಂದರೆಗಳಿಂದ ವಿಭಜಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಹಿಂದಿನ ಸರ್ಕಾರ, ನಮ್ಮ ಸರ್ಕಾರದಲ್ಲಿಯೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಹೇಳಿದ್ದಾರೆ.

    ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ಚಿಕ್ಕೋಡಿ ಜಿಲ್ಲೆಯ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆ ಹಾಗೂ ಜಿಲ್ಲೆಯ ನಾಯಕರ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

    ಜಿಲ್ಲೆಯ ಪ್ರತಿಷ್ಠೆಯ ಕಣವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಗುಂಪುಗಾರಿಕೆ ಮಾಡದೆ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು.

    ರಾಜ್ಯದಲ್ಲಿ ಈಗಾಗಲೇ ಶಿರಾ ಮತ್ತು ಆರ್‌ಆರ್ ನಗರ ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ನಡೆದ ಉಪಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ನಮಗೆ ಗೆಲುವು ಸಿಕ್ಕಿದೆ ಎಂದರು.
    ಶಾಸಕರ ಕರೊನಾ ಚಿಕಿತ್ಸೆ ಬಿಲ್ ವಿಚಾರ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಶಾಸಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅದರ ಬಿಲ್ ಅವರೇ ನೀಡಬೇಕು. ಆದರೂ ಈ ಕುರಿತು ವಾಸ್ತವ ತಿಳಿದುಕೊಂಡು ತಿಳಿಸುತ್ತೇನೆ ಎಂದರು.

    ಉಪಮುಖ್ಯಮಂತ್ರಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಪಿ.ರಾಜೀವ್, ಡಿ.ಐಂ. ಐಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ, ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ದೀಪಕ ಪಾಟೀಲ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts