25.9 C
Bengaluru
Wednesday, January 22, 2020

ಭಕ್ತರ ಪಾಲಿಗೆ ಆರಾಧ್ಯ ದೈವ ವೀರಭದ್ರಸ್ವಾಮಿ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಚಾಮರಾಜನಗರ: ನಂಬಿ ಬರುವ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡುವ ಶ್ರೀವೀರಭದ್ರಸ್ವಾಮಿ ಭಕ್ತರ ಪಾಲಿನ ಆರಾಧ್ಯ ದೈವವಾಗಿದ್ದಾನೆ.

ಚಾಮರಾಜನಗರದ ಕೇಂದ್ರ ಸ್ಥಾನದಲ್ಲಿರುವ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಈ ಭಾಗದ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿದೆ. ಏಕಶಿಲೆಯಲ್ಲಿ ನಿರ್ಮಾಣವಾಗಿರುವ ವೀರಭದ್ರಸ್ವಾಮಿ ವಿಗ್ರಹದ ಆಧಾರದ ಮೇಲೆ ಪುರಾತತ್ವ ಇಲಾಖೆಯು ದೇವಸ್ಥಾನ 7-8ನೇ ಶತಮಾನದಲ್ಲಿ ನಿರ್ಮಾಣವಾಗಿರಬಹುದು ಎಂದು ಅಂದಾಜಿಸಿದೆ. ಆದರೆ, ದೇವಸ್ಥಾನವನ್ನು ಯಾರು ನಿರ್ಮಿಸಿದರೆಂಬುದಕ್ಕೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ವೀರಭದ್ರಸ್ವಾಮಿಯ ಹಿನ್ನೆಲೆ: ದಕ್ಷಬ್ರಹ್ಮ ಎಂಬ ಮುನಿಗೆ ಮಕ್ಕಳಿಲ್ಲದ ಹಿನ್ನೆಲೆಯಲ್ಲಿ ಶಿವನ ಕುರಿತು ದಕ್ಷಬ್ರಹ್ಮ ದೀರ್ಘ ತಪಸ್ಸು ಮಾಡುತ್ತಾನೆ. ತಪಸ್ಸಿನ ಫಲವಾಗಿ ದಾಕ್ಷಾಯಿಣಿ ಎಂಬ ಹೆಣ್ಣು ಮಗಳು ಜನಿಸುತ್ತಾಳೆ. ದಕ್ಷಬ್ರಹ್ಮನು, ತನ್ನ ಮಗಳಾದ ದಾಕ್ಷಾಯಿಣಿಯನ್ನು ಶಿವನಿಗೆ ಕೊಟ್ಟು ಮದುವೆ ಮಾಡುತ್ತಾನೆ.

ಆ ನಂತರ ದಕ್ಷಬ್ರಹ್ಮನಿಗೆ ಬಹಳಷ್ಟು ಹೆಣ್ಣು ಮಕ್ಕಳು ಜನಿಸುತ್ತಾರೆ. ದಕ್ಷಬ್ರಹ್ಮ ಹಾಗೂ ಶಿವನ ನಡುವೆ ವೈಮನಸ್ಸು ಇರುತ್ತದೆ. ಪರಿಣಾಮ ದಕ್ಷಬ್ರಹ್ಮನು ಶಿವನ ಶಕ್ತಿ ಕುಂದಿಸಲು ದೊಡ್ಡಯಾಗವನ್ನು ಕೈಗೊಳ್ಳುತ್ತಾನೆ. ಈ ಯಾಗಕ್ಕೆ ದಾಕ್ಷಾಯಿಣಿಯನ್ನೂ ಆಹ್ವಾನಿಸಲಾಗುತ್ತದೆ.
ಶಿವ ಬೇಡವೆಂದರೂ ದಾಕ್ಷಾಯಿಣಿ ಹಠ ಮಾಡಿ ಯಾಗಕ್ಕೆ ತೆರಳುತ್ತಾಳೆ. ಈ ವೇಳೆ ಯಾಗದಲ್ಲಿ ಪಾಲ್ಗೊಂಡಿದ್ದ ದೇವಾನುದೇವತೆಗಳು ಶಿವನ ಕುರಿತು ಅವಹೇಳನವಾಗಿ ಮಾತನಾಡಿ ದಾಕ್ಷಾಯಿಣಿಯನ್ನು ಅವಮಾನಿಸುತ್ತಾರೆ. ಇದರಿಂದ ನೊಂದ ದಾಕ್ಷಾಯಿಣಿ ಉರಿಯುತ್ತಿರುವ ಯಜ್ಞಕ್ಕೆ ಹಾರಿ ತನ್ನ ದೇಹವನ್ನು ಆಹುತಿ ಕೊಡುತ್ತಾಳೆ.

ವಿಷಯ ತಿಳಿದು ಕೋಪಗೊಂಡ ಶಿವ ರುದ್ರತಾಂಡವ ರೂಪ ತಾಳುತ್ತಾನೆ. ಈ ವೇಳೆ ಶಿವನ ಬೆವರಿನ ಹನಿಯಿಂದ ವೀರಭದ್ರ ಜನನವಾಗಿ ದಕ್ಷಬ್ರಹ್ಮನನ್ನು ಸಂಹಾರ ಮಾಡುತ್ತಾನೆ ಎಂಬ ಪುರಾಣ ಕಥೆ ಇದೆ.

15ನೇ ಶತಮಾನದಲ್ಲಿ ಜೀರ್ಣೋದ್ಧಾರ: ಕ್ರಿ.ಶ.1527ರಲ್ಲಿ ವಿಜಯನಗರ ಸಾಮ್ರಾಜ್ಯದ ಆಡಳಿತಾವಧಿಯಲ್ಲಿ ಉಮ್ಮತ್ತೂರು ಪ್ರಾಂತ್ಯಕ್ಕೆ ಸೇರಿದ ಅರಿಕುಠಾರ(ಚಾಮರಾಜನಗರ)ದ ಅಂದಿನ ಪ್ರಭುಗಳಾಗಿದ್ದ ಚಂದ್ರಶೇಖರ ಒಡೆಯರ್ ಅವರು ಉಮ್ಮತ್ತೂರು ಪಾಳೇಗಾರರಿಗೆ ತೆರಿಗೆ(ಕ್ಷತ್ರಿಯ ಗುತ್ತಿಗೆ) ಪಾವತಿಸುತ್ತಿರುತ್ತಾರೆ.

ತೆರಿಗೆ ಪಾವತಿಯ ನೆನಪಿಗಾಗಿ ಉಮ್ಮತ್ತೂರು ಪಾಳೇಗಾರರಾದ ಮಲ್ಲರಾಜೇ ಒಡೆಯರ್, ಅರಿಕುಠಾರದ ಪ್ರಭುಗಳಾಗಿದ್ದ ಚಂದ್ರಶೇಖರ್ ಒಡೆಯರ್ ಜತೆ ಸೇರಿ ಶಿಥಿಲಾವಸ್ಥೆಯಲ್ಲಿದ್ದ ವೀರಭದ್ರಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿಸಿರುವುದು ದೇವಸ್ಥಾನದಲ್ಲಿರುವ ಶಾಸನದಿಂದ ತಿಳಿದು ಬರುತ್ತದೆ. ಕ್ರಿ.ಶ.1527 ರಲ್ಲಿ ಜೀರ್ಣೋದ್ಧಾರಗೊಂಡ ನಂತರ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಶೈವಾಗಮ ರೀತಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಶೈವಾಗಮ ರೀತಿಯಲ್ಲಿ ಪೂಜೆ: ವೀರಭದ್ರಸ್ವಾಮಿಗೆ ಪ್ರತಿ ದಿನ ಬೆಳಗ್ಗೆ ಶೈವಾಗಮ ರೀತಿಯಲ್ಲಿ ರುದ್ರಾಭಿಷೇಕ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಅಮಾವಾಸ್ಯೆಯಂದು ವಿಶೇಷ ಪೂಜೆ ಜರುಗಿ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯ ನಡೆಯುತ್ತದೆ. ದಿನ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆ ತನಕ ದೇವಸ್ಥಾನವನ್ನು ತೆರೆದು ವೀರಭದ್ರಸ್ವಾಮಿಗೆ ಪೂಜೆ ಸಲ್ಲಿಸಲಾಗುತ್ತದೆ.

ದುಷ್ಟಶಕ್ತಿಯ ಸಂಹಾರಕ್ಕೆ ಹೆಸರುವಾಸಿಯಾದ ವೀರಭದ್ರಸ್ವಾಮಿಯು ಈ ಭಾಗದ ಭಕ್ತರ ಕಷ್ಟಗಳನ್ನು ನಿವಾರಿಸುತ್ತಾನೆ. ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೇವಸ್ಥಾನಕ್ಕೆ ಬರುವ ಭಕ್ತರು ವೀರಭದ್ರಸ್ವಾಮಿಯಲ್ಲಿ ಪ್ರಾರ್ಥನೆ ಮಾಡಿ ಹರಕೆ ಹೊತ್ತು ಹೋಗುತ್ತಾರೆ. ಸಮಸ್ಯೆ ನಿವಾರಣೆಯಾದ ನಂತರ ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸುತ್ತಾರೆ.

ಶಿಥಿಲಗೊಂಡಿರುವ ದೇವಸ್ಥಾನ: ಕ್ರಿ.ಶ.1527 ರಲ್ಲಿ ವೀರಭದ್ರಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿರುವುದನ್ನು ಹೊರತುಪಡಿಸಿದರೆ ಇಲ್ಲಿಯತನಕ ಜೀರ್ಣೋದ್ಧಾರ ಮಾಡಿಲ್ಲ. ಇದರಿಂದ ದೇವಸ್ಥಾನವು ಶಿಥಿಲಾವಸ್ಥೆಯನ್ನು ತಲುಪಿದೆ. ದೇವಸ್ಥಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಮುಂದಾಗಿಲ್ಲ.

ದೇವಸ್ಥಾನಕ್ಕೆ ಬರುವ ಅಧಿಕಾರಿಗಳು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡುವ ನಿಟ್ಟಿನಲ್ಲಿ ಅನುದಾನ ಲಭ್ಯವಿಲ್ಲ ಎಂದೇ ಹೇಳಿ ಹೋಗುತ್ತಾರೆ. ಆದ್ದರಿಂದ ದೇವಸ್ಥಾನದ ಅಭಿವೃದ್ಧಿಯ ಜತೆಗೆ ದೇವಸ್ಥಾನದ ಸುತ್ತ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಮುಂದಾಗಬೇಕು.

 ಯಂತ್ರ ಮಂತ್ರ ಸಿದ್ಧಿಗಳ ಜತೆ ವೀರಭದ್ರಸ್ವಾಮಿಯು ಭದ್ರಕಾಳಿಯ ಸಮೇತವಾಗಿ ಭಕ್ತರ ಕಷ್ಟವನ್ನು ದೂರ ಮಾಡುತ್ತಾನೆ. ನಮ್ಮ ಕುಟುಂಬದವರು ಕಳೆದ 4 ತಲೆ ಮಾರುಗಳಿಂದಲೂ ದೇವಸ್ಥಾನದಲ್ಲಿ ಅರ್ಚಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದ ರಕ್ಷಣೆಗೆ ಸರ್ಕಾರ ಮುಂದಾಗಬೇಕು.
ಪ್ರದೀಪ್ ದೇವಸ್ಥಾನದ ಅರ್ಚಕ.

 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...