More

    ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಗೆ ಸದ್ಯಕ್ಕಿಲ್ಲ ಟೋಲ್​!

    ಬೆಂಗಳೂರು: ನಾಳೆಯಿಂದಲೇ ಟೋಲ್ ಸಂಗ್ರಹಿಸಲಾಗುವುದು ಎಂದು ಘೋಷಿಸಲಾಗಿದ್ದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇತ್ತೀಚಿನ ಬೆಳವಣಿಗೆ ಪ್ರಕಾರ ಟೋಲ್​ ಸಂಗ್ರಹ ಸದ್ಯಕ್ಕಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಸಂಗ್ರಹಿಸಲಾಗುವುದು ಎಂಬ ಮಾಹಿತಿ ಜೊತೆಗೆ ಟೋಲ್​ ಶುಲ್ಕದ ವಿವರ ಪ್ರಕಟಗೊಂಡಿತ್ತು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪವೂ ವ್ಯಕ್ತವಾಗಿತ್ತು. ಇದರ ಬೆನ್ನಿಗೇ ಸದ್ಯಕ್ಕೆ ಟೋಲ್ ಸಂಗ್ರಹಿಸುವುದಿಲ್ಲ ಎಂಬ ಘೋಷಣೆ ಅಚ್ಚರಿ ಮೂಡಿಸಿದೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಸಂಗ್ರಹ ಆರಂಭಿಸುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಟೋಲ್ ಇಲ್ಲ ಎಂಬ ಈ ಘೋಷಣೆಯಿಂದ ಸಾರ್ವಜನಿಕರು ಸಂತಸಗೊಂಡಿದ್ದು, ನಿರಾಳರಾಗಿದ್ದಾರೆ.

    ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

    ಕೊಲೆಯಾದ ರೂಪದರ್ಶಿಯ ಕಾಲು ಫ್ರಿಡ್ಜ್​ನಲ್ಲಿತ್ತು!; ರುಂಡಕ್ಕಾಗಿ ಪೊಲೀಸರ ಹುಡುಕಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts