

ನವದೆಹಲಿ: ಕಳೆದ ಕೆಲವು ದಿನಗಳಿಂದ ಟೀಮ್ ಇಂಡಿಯಾ ಆಟಗಾರ ಯಜುವೇಂದ್ರ ಚಹಲ್ (Yuzvendra Chahal) ಅವರ ವಿಚ್ಛೇದನ ಸುದ್ದಿ ಹೆಚ್ಚು ಸದ್ದು ಮಾಡುತ್ತಿದ್ದು, ದಮಪತಿಗಳು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಅನ್‌ಫಾಲೋ ಮಾಡಿ ಫೋಟೋಗಳನ್ನು ಡಿಲೀಟ್ ಮಾಡುವ ಮೂಲಕ ಡಿವೋರ್ಸ್ ವಿಚಾರಕ್ಕೆ ಇಂಬು ನೀಡಿದ್ದರು. ಇದೀಗ ಚಹಲ್ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ವಿಚ್ಛೇದನ ವದಂತಿಗೆ ಮತ್ತಷ್ಟು ಪುಷ್ಠಿ ನೀಡಿದ್ದು, ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಪೋಸ್ಟ್ ನೋಡುವುದಾದರೆ, ಮೌನವು ಆಳವಾದ ಮಧುರವಾಗಿದೆ, ಎಲ್ಲಾ ಶಬ್ದಗಳಿಗಿಂತ ಅದನ್ನು ಕೇಳುವವರಿಗೆ ಎಂಬ ಪೋಸ್ಟ್ಅನ್ನು ಚಹಲ್ ಹಂಚಿಕೊಂಡಿದ್ದು, ಸದ್ಯ ಹೊಸ ಚರ್ಚೆಯನ್ನ ಹುಟ್ಟುಹಾಕಿದೆ.
ಕಠಿಣ ಪರಿಶ್ರಮವು ಜನರ ಪಾತ್ರವನ್ನು ಬಹಿರಂಗಪಡಿಸುತ್ತದೆ. ನಿಮ್ಮ ಪ್ರಯಾಣ ನಿಮಗೆ ತಿಳಿದಿದೆ. ನಿನ್ನ ನೋವು ನಿನಗೆ ಗೊತ್ತು. ಇಲ್ಲಿಗೆ ತಲುಪಲು ನೀವು ಏನು ಮಾಡಿದ್ದೀರಿ ಎಂಬುದು ನಿಮಗೆ ತಿಳಿದಿದೆ. ಜಗತ್ತಿಗೇ ಗೊತ್ತು. ನೀವು ಎತ್ತರದಲ್ಲಿದ್ದೀರಿ. ನಿಮ್ಮ ತಂದೆ ತಾಯಿ ಹೆಮ್ಮೆ ಪಡುವಂತೆ ಶ್ರಮಿಸಿದ್ದೀರಿ. ಹೆಮ್ಮೆಯ ಮಗನಂತೆ ಯಾವಾಗಲೂ ಬಲವಾಗಿ ಉಳಿಯಿರಿ ಎಂದು ಯಜುವೇಂದ್ರ ಚಹಲ್ (Yuzvendra Chahal) ಜನವರಿ 05ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಕಳೆದ ಕೆಲ ತಿಂಗಳಿನಿಂದ ದಂಪತಿಗಳು ಪ್ರತ್ಯೇಕವಾಗಿ ವಾಸಿಸುತ್ತಿದ್ದು, ದಂಪತಿಗಳು ವಿಚ್ಛೇದನ ಪಡೆಯುತ್ತಾರೆ ಎಂಬ ಸುದ್ದಿ ಕೇಳಿ ಬರುತ್ತಿರುವುದು ಇದೇ ಮೊದಲಲ್ಲ. 2023ರಲ್ಲಿ ಧನಶ್ರೀ ತನ್ನ ಇನ್‌ಸ್ಟಾಗ್ರಾಮ್ ಖಾತೆಯಿಂದ ಚಹಾಲ್ ಅವರನ್ನು ಅನ್‌ಫಾಲೋ ಮಾಡಿದ್ದರು. ಆ ಬಳಿಕ ಚಹಲ್ (Yuzvendra Chahal) ಹೊಸ ಜೀವನವು ಲೋಡ್ ಆಗುತ್ತಿದೆ ಎಂದು ಪೋಸ್ಟ್ ಮಾಡುವ ಮೂಲಕ ವಿಚ್ಛೇದನ ವದಂತಿಗೆ ಪುಷ್ಠಿ ನೀಡಿದ್ದರು. ಆ ಬಳಿಕ ವಿಚ್ಛೇದನ ಕುರಿತಾದ ಸುದ್ದಿಗಳನ್ನು ತಳ್ಳಿ ಹಾಕಿದ್ದರು. ಇದೀಗ ಸ್ಟೋರಿ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿರುವ ಚಹಲ್ ಯಾವ ರೀತಿ ಸ್ಪಷ್ಟನೆ ಕೊಡಲಿದ್ದಾರೆ ಎಂದು ಕಾದು ನೋಡಬೇಕಿದೆ.