More

    ಉದ್ಯಮಿ ಮುಕೇಶ್​ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ: ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು

    ಮುಂಬೈ: ರಿಲಯನ್ಸ್​ ಇಂಡಸ್ಟ್ರಿ ಲಿಮಿಟೆಡ್​ನ ಚೇರ್ಮನ್​ ಹಾಗೂ ವಿಶ್ವದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಮುಕೇಶ್​ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಮುಂಬೈ ಪೊಲೀಸರು ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.

    ಆರೋಪಿಯನ್ನು ಅಫ್ಜಲ್​ ಎಂದು ಗುರುತಿಸಲಾಗಿದೆ. ಮೂರರಿಂದ ನಾಲ್ಕು ಬಾರಿ ರಿಲಯನ್ಸ್ ಫೌಂಡೇಶನ್​ನ ಹರ್ಸ್ಕಿಸಂದಾಸ್ ಆಸ್ಪತ್ರೆಯ ದೂರವಾಣಿ ಸಂಖ್ಯೆಗೆ ಆರೋಪಿ ಬೆದರಿಕೆ ಕರೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ಕರೆ ಮಾಡಿದ ಫೋನ್ ಸಂಖ್ಯೆಯನ್ನು ಪೊಲೀಸರು ಗುರುತಿಸಿದ ನಂತರ ಶಂಕಿತನನ್ನು ಪತ್ತೆಹಚ್ಚಿ, ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ದೂರವಾಣಿ ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

    ಕಳೆದ ವರ್ಷ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸ ‘ಆಂಟಿಲಿಯಾ’ದ ಹೊರಗೆ 20 ಸ್ಫೋಟಕ ಜಿಲೆಟಿನ್ ಸ್ಟಿಕ್‌ಗಳು ಮತ್ತು ಬೆದರಿಕೆ ಪತ್ರವಿರುವ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣ, ಸಚಿನ್ ವಾಜೆ ನೇತೃತ್ವದ ಮುಂಬೈನ ಅಪರಾಧ ಗುಪ್ತಚರ ಘಟಕ ಸೇರಿದಂತೆ ಹಲವಾರು ಪೊಲೀಸರು ತನಿಖೆಗಾಗಿ ಸ್ಥಳಕ್ಕೆ ತಲುಪಿದರು. ಸಚಿನ್ ವಾಜೆ ಪ್ರಕರಣದ ಪ್ರಮುಖ ತನಿಖಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

    ಇದಾದ ಕೆಲವು ದಿನಗಳ ನಂತರ, ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೇನ್ ನಿಗೂಢ ಸಾವಿನ ಬಳಿಕ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಯಿತು. ಅಂಬಾನಿ ನಿವಾಸದ ಹೊರಗೆ ಸಿಕ್ಕ ಸ್ಕಾರ್ಪಿಯೋದ ಮಾಲೀಕ ಹಿರೇನ್ ಆಗಿದ್ದರು. ಅಲ್ಲದೆ, ವಾರದ ಹಿಂದೆಯೇ ಆ ಕಾರು ಕಳ್ಳತನವಾಗಿತ್ತು ಎಂದು ಅವರು ಹಿಂದೆಯೇ ಹೇಳಿಕೊಂಡಿದ್ದರು. ಮಾರ್ಚ್ 5, 2021 ರಂದು ಥಾಣೆಯ ತೊರೆಯಲ್ಲಿ ಅವರ ದೇಹವು ಪತ್ತೆಯಾಗಿತ್ತು. (ಏಜೆನ್ಸೀಸ್​)

    ಸ್ವಾತಂತ್ರ್ಯ ದಿನದಂದೇ ಶ್ರೀಮಂತ ಉದ್ಯಮಿ ಮುಕೇಶ್​ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ

    VIDEO: ಕೋಲಾರದಲ್ಲಿ ಅನಾವರಣಗೊಂಡ ದೇಶದ ಅತಿದೊಡ್ಡ ಧ್ವಜ ಕಂಡು ಪುಳಕಿತರಾದ ಜನ- ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ

    ಗಾಂಧೀಜಿ ಹಂತಕರಿಂದಲೇ ರಾಷ್ಟ್ರ ವಿಭಜನೆ, ಈಗಿರುವುದು ನಕಲಿ ಕಾಂಗ್ರೆಸ್: ರಾಷ್ಟ್ರೀಯ ಪಕ್ಷಗಳ ವಿರುದ್ಧ ಎಚ್​ಡಿಕೆ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts