More

    ಪ್ರವಾಸೋದ್ಯಮಕ್ಕೆ ಜಿ-20 ಸಭೆ ಒತ್ತು: ಹೊಸಪೇಟೆ ನಗರಸಭೆ ಅಧ್ಯಕ್ಷೆ ಎ.ಲತಾ ಹೇಳಿಕೆ

    ಹೊಸಪೇಟೆ: ಹಂಪಿಯಲ್ಲಿ ನಡೆಯುತ್ತಿರುವ ಜಿ-20 ಸಭೆ ನಮ್ಮ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದು ನಗರಸಭೆ ಅಧ್ಯಕ್ಷೆ ಎ.ಲತಾ ಹೇಳಿದರು.


    ಕೇಂದ್ರ ಸಂವಹನ ಇಲಾಖೆ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ರೋಟರಿ ಕ್ಲಬ್‌ನಿಂದ ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿ-20 ಸಭೆ, ಕೇಂದ್ರದ ಜನಪರ ಆಡಳಿತ, ಬಡವರ ಕಲ್ಯಾಣ ಕುರಿತ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಪ್ರತಿ ಸವಲತ್ತು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು ಎಂದರು.
    ಟಿಎಚ್‌ಒ ಡಾ.ಬಸವರಾಜು ಮಾತನಾಡಿ, ಜನರ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡುತ್ತಿದ್ದು, 2025ರೊಳಗೆ ದೇಶದಿಂದ ಕ್ಷಯ ರೋಗವನ್ನು ನಿವಾರಿಸುವ ಮಹತ್ವಾಕಾಂಕ್ಷಿ ಯೋಜನೆ ಜಾರಿಯಲ್ಲಿದೆ ಎಂದರು.

    ಇದನ್ನೂ ಓದಿ: ವಿಶ್ವ ವಿಖ್ಯಾತ ಹಂಪಿಯಲ್ಲಿ ಜಿ-20 ಸಭೆಗೆ ಸಿದ್ಧತೆ


    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಶಿವಪ್ಪ ಮಾತನಾಡಿದರು. ಕಾಲೇಜು ವಿದ್ಯಾರ್ಥಿಗಳಿಂದ ಕೋಲಾಟ, ಭರತ ನಾಟ್ಯ ಪ್ರದರ್ಶನ ನಡೆಯಿತು. ಕೇಂದ್ರ ಸಂವಹನ ಇಲಾಖೆ ನಿರ್ದೇಶಕಿ ಪಲ್ಲವಿ ಚಿಣ್ಯಾ, ಸಿಡಿಪಿಒ ಭೋಗೇಶ್, ಎಸಿಡಿಪಿಒ ಅಂಬುಜಾ, ಮರಿಯಮ್ಮನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಮಲ್ಲಿಕಾರ್ಜುನ, ಕ್ಷೇತ್ರ ಪ್ರಚಾರ ಅಧಿಕಾರಿ ಜಿ.ತುಕಾರಾಮ ಗೌಡ, ಪ್ರೊ.ಕೆ.ನಾಗಣ್ಣ, ಶ್ರೀಕಾಂತ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts