More

    ವೋಟ್‌ಬ್ಯಾಂಕ್‌ಗಾಗಿ ಕಾಂಗ್ರೆಸ್‌ನಿಂದ ಸಿಎಎಗೆ ವಿರೋಧ

    ಚಿಕ್ಕೋಡಿ: ವೋಟ್‌ಬ್ಯಾಂಕ್ ಕೈ ತಪ್ಪುತ್ತದೆ ಎಂಬ ಭಯದಲ್ಲಿ ಬಿಜೆಪಿ ಸರ್ಕಾರದ ಮಹತ್ವದ ನಿರ್ಧಾರವಾದ ಸಿಎಎಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಖಾತೆ ಸಚಿವ ಅನುರಾಗ ಠಾಕೂರ್ ಹೇಳಿದ್ದಾರೆ.

    ಪಟ್ಟಣದ ಸಿಎಲ್‌ಇ ಸಂಸ್ಥೆಯ ಆವರಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಶನಿವಾರ ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸಿಎಎ ಪೌರತ್ವ ನೀಡುವ ಕಾಯ್ದೆಯಾಗಿದೆ. ಆದರೆ, ಕೆಲವರು ಕಾಯ್ದೆಯನ್ನು ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವ ಮೂಲಕ ಸಮಾಜದ ನೆಮ್ಮದಿ ಹಾಳುಮಾಡುತ್ತಿದ್ದಾರೆ. ಕಾಯ್ದೆ ಸಂಬಂಧ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದೇ ಜನಜಾಗೃತಿಯ ಉದ್ದೇಶವಾಗಿದೆ ಎಂದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಪ್ರಧಾನಿ ಮೋದಿಯವರು ಭಾರತೀಯ ಸಂಸ್ಕೃತಿ, ಸಂಪ್ರದಾಯ ಕುರಿತು ವಿದೇಶದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರಧಾನಿ ಮೋದಿ ಆಡಳಿತದಿಂದಾಗಿ ಭಾರತ ಇಂದು ವಿಶ್ವದ ಪ್ರಸಿದ್ಧ ದೇಶಗಳಲ್ಲಿ ಉನ್ನತ ಸ್ಥಾನ ಪಡೆದುಕೊಂಡಿದೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ಕರೆದುಕೊಂಡು ಹೋಗಲು ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಜನರು ಸಹಕಾರ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು  ಎಂದು ಕೋರಿದರು.
    ಎಂಎಲ್‌ಸಿ ಮಹಾಂತೇಶ ಕವಟಗಿಮಠ ಮಾತನಾಡಿದರು.

    ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಡಿ.ಎಂ. ಐಹೊಳೆ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮುಖಂಡ ಈರಣ್ಣ ಕಡಾಡಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಶಶಿಕಾಂತ ನಾಯಕ, ಜಿಪಂ ಸದಸ್ಯ ಪವನ ಕತ್ತಿ, ಚಿದಾನಂದ ಸವದಿ, ಮಾಜಿ ಶಾಸಕ ಮನೋಹರ ಕಟ್ಟಿಮನಿ, ನಾಗೇಶ ಕಿವಡ,
    ದುಂಡಪ್ಪ ಬೆಂಡವಾಡೆ, ಮಹೇಶ ಭಾತೆ, ಪ್ರವೀಣ ಕಾಂಬಳೆ, ಸಂಜು ಕವಟಗಿಮಠ, ಅಕ್ರಮ ಅರ್ಕಾಟೆ ಇದ್ದರು.




    ದೇಶದ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ರೀತಿಯ ತೊಂದರೆಯಿಲ್ಲ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ.
    | ಡಾ. ಪ್ರಭಾಕರ ಕೋರೆ ರಾಜ್ಯಸಭಾ ಸದಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts