More

    ಅನಧಿಕೃತ ಚರ್ಚ್ ತೆರವುಗೊಳಿಸಲು ಒತ್ತಾಯ

    ಶಿವಮೊಗ್ಗ: ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಪಂ ವ್ಯಾಪ್ತಿಯ ತಮ್ಮಡಿಹಳ್ಳಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ನಿವೇಶನದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಲಾಗಿದೆ. ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಮಂಗಳವಾರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.

    ವಸತಿ ಯೋಜನೆಯಡಿ ಮಂಜೂರಾದ ನಿವೇಶನದಲ್ಲಿ ಇಂಡಿಯಾ ಚರ್ಚ್ ಅಫ್ ಗಾಡ್ ಹೆಸರಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಇಲ್ಲಿ ಫಾದರ್ ಕೂಡಾ ಇದ್ದಾರೆ. ಈ ಗ್ರಾಮದಲ್ಲಿ ಕ್ರೈಸ್ತರೇ ಇಲ್ಲದಿರುವಾಗ ಚರ್ಚ್‌ನ ಅವಶ್ಯಕತೆಯೇ ಇಲ್ಲ. ಇಲ್ಲಿ ಪ್ರಾರ್ಥನೆ ಸಲ್ಲಿಸುವುದು ಅದನ್ನು ಧ್ವನಿವರ್ಧಕದ ಮೂಲಕ ಎಲ್ಲರಿಗೂ ಕೇಳುವಂತೆ ಮಾಡುವುದು, ಮನೆ ಮನೆಗಳಿಗೆ ಭೇಟಿ ನೀಡುವುದು ಮುಂತಾದ ಬೆಳವಣಿಗೆಗಳು ಅನೇಕ ಅನುಮಾನಗಳಿಗೆ ಕಾರಣವಾಗಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
    ಮತಾಂತರಕ್ಕೆ ಜನರನ್ನು ಪ್ರಚೋದಿಸುವ ಪ್ರಯತ್ನ ಸದ್ದಿಲ್ಲದೇ ನಡೆಯುತ್ತಿರುವ ಅನುಮಾನವಿದೆ. ಸ್ಥಳೀಯ ಗ್ರಾಪಂಗೆ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದ ಸಂದರ್ಭದಲ್ಲಿ ಅನಧಿಕೃತ ಪ್ರಾರ್ಥನಾ ಮಂದಿರಕ್ಕೆ ಅವಕಾಶ ನೀಡಬಾರದು ಎಂದು ಜನಪ್ರತಿನಿಧಿಗಳು ನಿರ್ಣಯ ಕೈಗೊಂಡಿದ್ದಾರೆ. ಆದರೂ ಮತಾಂತರದ ಪ್ರಯತ್ನಗಳು ಮುಂದುವರಿದಿವೆ ಎಂದು ದೂರಿದರು.
    ಸ್ಥಳೀಯ ಗ್ರಾಪಂ ಹಾಗೂ ತಾಲೂಕು ಆಡಳಿತ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಅನಧಿಕೃತ ಚರ್ಚ್‌ಗೆ ಅವಕಾಶ ನೀಡಬಾರದು. ನಮ್ಮ ಮನವಿಗೆ ಆಡಳಿತ ವ್ಯವಸ್ಥೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಭದ್ರಾವತಿ ತಾಲೂಕಿನಲ್ಲಿ ವ್ಯಾಪಕ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ದೇವರಾಜ್ ಅರಳಿಹಳ್ಳಿ, ಪ್ರಮುಖರಾದ ಉಮೇಶ್ ಗೌಡ, ಮೇಘರಾಜ್, ರಾಜೇಂದ್ರ, ಲಕ್ಷ್ಮಣ, ಸ್ಥಳೀಯ ಗ್ರಾಪಂ ಸದಸ್ಯರಾದ ವಡಿವೇಲು, ಸಂತೋಷ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts