More

    ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಒತ್ತಾಯ

    ಚಿಕ್ಕಮಗಳೂರು: ರಾಜ್ಯದಲ್ಲಿ ದಿನೇ ದಿನೇ ಹಿಂದುಗಳ ಮೇಲೆ ಸಾಲುಸಾಲಾಗಿ ಮುಸ್ಲಿಂ ಮತಾಂದರಿಂದ ಹಲ್ಲೆ ನಡೆಯುತ್ತಿವೆ. ಜೊತೆಗೆ ಕೊಲೆಯೂ ಸಾಮಾನ್ಯ ಎನ್ನುವಂತಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

    ರಾಜ್ಯದಲ್ಲಿ ಹಿಂದುಗಳು ಭಯದಿಂದಲೇ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಸ್ಲಿಂ ಸಮುದಾಯದವರು ರಾಕ್ಷಸೀಯ ಅಟ್ಟಹಾಸ ಮೆರೆಯುತ್ತಿದ್ದಾರೆ. ಸಂವಿಧಾನ, ಕಾನೂನು, ಪೊಲೀಸ್ ಇಲಾಖೆಗೆ ಯಾವುದೇ ಮರ್ಯಾದೆ ನೀಡದೆ ತಾಲಿಬಾನ್ ಮಾದರಿ ನೀತಿ ಅನುಸರಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಇದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
    ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಇರಿದು ಕೊಲ್ಲಲಾಗಿದೆ. ದಾವಣಗೆರೆ ಜಿಲ್ಲೆ ನಲ್ಲೂರಿನಲ್ಲಿ ಮೂರು ಜನ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಚಿತ್ರದುರ್ಗದಲ್ಲಿ ಮುಸ್ಲಿಂ ಯುವತಿಗೆ ಡ್ರಾಪ್ ನೀಡಲು ಹೋದ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನಲ್ಲಿಯೂ ಹಲ್ಲೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ದೂರಿದರು.
    ರಾಜ್ಯದಲ್ಲಿ ಅನ್ಯ ಧರ್ಮೀಯರಿಂದ ಅಲ್ಲೇ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರು ಅವುಗಳನ್ನು ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜಾರಿಗೊಳಿಸುವ ಉದ್ದೇಶದಿಂದ ರಾಷ್ಟ್ರಪತಿ ಆಳ್ವಿಕೆ ಹೇರಲು ಶಿಫಾರಸ್ಸು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಶ್ರೀರಾಮ ಸೇನೆ ವಿಭಾಗಾಧ್ಯಕ್ಷ ರಂಜಿತ್ ಶೆಟ್ಟಿ, ದುರ್ಗಾ ಸೇನೆ ಜಿಲ್ಲಾಧ್ಯಕ್ಷೆ ನವೀನಾ ರಂಜಿತ್, ಪ್ರಮುಖರಾದ ರಾಜೇಂದ್ರ ಕುಮಾರ್, ಹರೀಶ್, ಓಂ ಪ್ರಕಾಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts