More

    ಮೇವು ಬ್ಯಾಂಕ್ ಸ್ಥಾಪಿಸಲು ಒತ್ತಾಯ

    ಕಲಘಟಗಿ: ತಾಲೂಕಿನಲ್ಲಿನ ದನಕರುಗಳಿಗೆ ಮೇವು ಒದಗಿಸಲು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅವರಿಗೆ ಮನವಿ ಸಲ್ಲಿಸಿದರು.

    ಕಲಘಟಗಿ ತಾಲೂಕನ್ನು ಬರಪೀಡಿತವೆಂದು ಘೋಷಿಸಿ, ಮೂರು ತಿಂಗಳು ಕಳೆಯುತ್ತ ಬಂದರೂ ಬರ ಪರಿಹಾರ ರೈತರ ಕೈ ಸೇರಿಲ್ಲ. ಮುಂಗಾರು ಹಂಗಾಮಿನಲ್ಲಿ ಸಮರ್ಪಕ ಮಳೆಯಾಗದೆ ನಿರೀಕ್ಷೆಯಂತೆ ಬೆಳೆ ಬಾರದಿರುವುದರಿಂದ ದನಕರುಗಳಿಗೆ ಮೇವಿನ ಅಭಾವ ಸೃಷ್ಟಿಯಾಗಿದೆ. ಆದ್ದರಿಂದ, ಸರ್ಕಾರ ಈ ಕೂಡಲೇ ಹೋಬಳಿ ಕೇಂದ್ರದಲ್ಲಿ ಮೇವು ಬ್ಯಾಂಕ್ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ತಾಲೂಕು ಅಧ್ಯಕ್ಷ ಅಲ್ಲಾವುದ್ದೀನ್ ಅಡ್ಲಿ, ಉಪಾಧ್ಯಕ್ಷ ಈಶ್ವರ ನಾಡಗೇರ, ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ, ಜಿಲ್ಲಾ ಉಪಾಧ್ಯಕ್ಷ ಹನುಮೇಶ ಹುಡೇದ, ಉಳವಪ್ಪ ಬಳಿಗೇರ, ಸಂತೋಷ ಘೋರ್ಪಡೆ, ಮಹಾವೀರ ಧೂಳಿಕೊಪ್ಪ , ದೇವರಾಜ ಮಂಗಳಗಟ್ಟಿ, ಹನುಮಂತಪ್ಪ ಕೊಪ್ಪದ, ಶಿವಪ್ಪ ಕೋಟಿ, ಗಂಗಯ್ಯ ಹಿರೇಮಠ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts