More

    ಕ್ರೈಸ್ ಸಮಾಜ ವಿಜ್ಞಾನ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲು ಒತ್ತಾಯ

    ಬೆಂಗಳೂರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕೆಆರ್‌ಐಇಎಸ್) ವ್ಯಾಪ್ತಿಯ ಶಾಲೆಗಳಲ್ಲಿ ಕಾರ್ಯನಿರ್ವಹಿಸಲು ಕೆಪಿಎಸ್ಸಿ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಹುದ್ದೆ ಆಕಾಂಕ್ಷಿಕಗಳು ಒತ್ತಾಯಿಸಿದ್ದಾರೆ.

    ಈ ಸಂಬಂಧ ಇತ್ತೀಚೆಗೆ ಕೆಪಿಎಸ್ಸಿ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿರುವ ಆಕಾಂಕ್ಷಿಗಳು, ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಕಾರ್ಯ ನಿರ್ವಹಿಸಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ಸಮಾಜ ವಿಜ್ಞಾನ ವಿಷಯದ ಹೆಚ್ಚುವರಿ ಪಟ್ಟಿಯನ್ನು ಜ.18ರಂದು ಬಿಡುಗಡೆಗೊಳಿಸಿ 2 ತಿಂಗಳು ಕಳೆದಿದೆ. ಆದರೆ, ಈ ವರೆಗೂ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿಲ್ಲ. ಇದರಿಂದ ಹೆಚ್ಚುವರಿ ಪಟ್ಟಿಯಲ್ಲಿರುವ ಎಲ್ಲ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

    ಪರೀಕ್ಷೆ ನಡೆಸಿರುವ ವಿವಿಧ 9 ವಿಷಯಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 2023ರ ಆಗಸ್ಟ್ 17ರಂದು ಬಿಡುಗಡೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕಳೆದ 3 ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜ ವಿಜ್ಞಾನ ವಿಷಯದ ಅಭ್ಯರ್ಥಿಗಳಿಗೆ ಮಾತ್ರ ಅನ್ಯಾಯವಾಗಿದ್ದು, ಕೂಡಲೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts