ಮುಂಡರಗಿ: ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ತಾಲೂಕು ಎಬಿವಿಪಿ ವತಿಯಿಂದ ಸೋಮವಾರ ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರ ಕೂಡಲೇ ಬಸ್ಗಳ ಸಂಖ್ಯೆ ಹೆಚ್ಚಳ ಮಾಡಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು ಮತ್ತು ಏರಿಕೆ ಮಾಡಿರುವ ಬಸ್ ಪ್ರಯಾಣ ದರವನ್ನು ಇಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಚಾಲಕ ಮಹಾಂತಯ್ಯ ಹಿರೇಮಠ, ಸಂಜು ದೇವರಮನಿ, ಸಚಿನ್ಕುಮಾರ ದೇಸಾಯಿ, ತೇಜು ಸೊರಟೂರು, ಇತರರಿದ್ದರು.