25.5 C
Bangalore
Monday, December 16, 2019

ವಿದೇಶಿ ದೇಣಿಗೆ ಸ್ವೀಕಾರ ನಿಯಮ ಬದಲು: ಮತಾಂತರದ ಆರೋಪದಲ್ಲಿ ಶಿಕ್ಷೆಯಾಗಿಲ್ಲ ಎಂದು ಘೋಷಿಸುವುದು ಕಡ್ಡಾಯ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ನವದೆಹಲಿ: ಕೇಂದ್ರ ಗೃಹ ಸಚಿವಾಲಯ ವಿದೇಶಿ ದೇಣಿಗೆ ಸ್ವೀಕರಿಸುವ ಎನ್​ಜಿಒಗಳ ನಿಯಮವನ್ನು ಬದಲಿಸಿ ಸೋಮವಾರ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ವಿದೇಶಿ ದೇಣಿಗೆ ಸ್ವೀಕರಿಸುವ ಎನ್​ಜಿಒಗಳ ಪ್ರತಿಯೊಬ್ಬ ಸದಸ್ಯರೂ ಮತಾಂತರ ಕಾರ್ಯದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ತಾವೆಂದೂ ವಿಚಾರಣೆಗೊಳಪಟ್ಟಿಲ್ಲ ಹಾಗೂ ಶಿಕ್ಷೆಗೆ ಒಳಗಾಗಿಲ್ಲ ಎಂದು ಘೋಷಿಸುವುದು ಕಡ್ಡಾಯವಾಗಿದೆ.

- Advertisement -

ವಿದೇಶಿ ದೇಣಿಗೆ (ನಿಯಂತ್ರಣ) ನಿಯಮಗಳು, 2011ಕ್ಕೆ ಬದಲಾವಣೆ ತಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ಮುಂದೆ ವಿದೇಶದಿಂದ ವೈಯಕ್ತಿಕವಾಗಿ 1 ಲಕ್ಷ ರೂ. ಮೌಲ್ಯದ ಉಡುಗೊರೆ ಪಡೆದರೆ ಆ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವ ಅವಶ್ಯಕತೆ ಇರುವುದಿಲ್ಲ ಎನ್ನಲಾಗಿದೆ.

ಬದಲಾಗಿರುವ ನಿಯಮಗಳ ಪ್ರಕಾರ ಎನ್​ಜಿಒದ ಮುಖ್ಯ ಸದಸ್ಯರು, ಪದಾಧಿಕಾರಿಗಳು ಮತ್ತು ಸದಸ್ಯರು ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸಿದ್ದಕ್ಕಾಗಿ ಅಥವಾ ಮತೀಯ ಗಲಭೆ ಮತ್ತು ಸಾಮರಸ್ಯ ಕದಡಿದ್ದಕ್ಕಾಗಿ ತಮಗೆ ಶಿಕ್ಷೆಯಾಗಿಲ್ಲ ಹಾಗೂ ವಿಚಾರಣೆಗೊಳಪಟ್ಟಿಲ್ಲ ಎಂದು ಪ್ರಮಾಣಪತ್ರದ ಮೂಲಕ ಘೋಷಿಸುವುದು ಕಡ್ಡಾಯವಾಗಿದೆ.

ಎಫ್​ಸಿಆರ್​ಎ 2010ರ ಪ್ರಕಾರ ವಿದೇಶಿ ದೇಣಿಗೆ ಸ್ವೀಕರಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸುತ್ತಿದ್ದ ಎನ್​ಜಿಒದ ನಿರ್ದೇಶಕರು ಮಾತ್ರ ಇಂಥ ಘೋಷಣೆ ಮಾಡಬೇಕಾಗಿತ್ತು.

ಇದರ ಜತೆಗೆ ಈಗ ಎನ್​ಜಿಒಗಳ ಪ್ರತಿಯೊಬ್ಬ ಸದಸ್ಯರು ಎನ್​ಜಿಒ ಪಡೆಯುವ ವಿದೇಶಿ ದೇಣಿಗೆಯನ್ನು ಅನ್ಯ ಉದ್ದೇಶಗಳಿಗಾಗಿ ಬಳಸಿಲ್ಲ, ದೇಶದ್ರೋಹಿ ಚಟುವಟಿಕೆಗೆ ಬೆಂಬಲಿಸಲು ಅಥವಾ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಬಳಸಿಲ್ಲ ಎಂದು ಕಡ್ಡಾಯವಾಗಿ ಘೋಷಿಸಬೇಕಿದೆ. ಇದಕ್ಕೂ ಮುನ್ನ ವಿದೇಶಿ ದೇಣಿಗೆ ಸ್ವೀಕರಿಸಲು ಅನುಮತಿ ಕೋರುವ ವ್ಯಕ್ತಿ ಈ ರೀತಿಯ ಘೋಷಣೆ ಮಾಡಿದ್ದರೆ ಸಾಕಾಗುತ್ತಿತ್ತು.

ಈ ಹಿಂದೆ ಭಾರತೀಯ ರೂಪಾಯಿ ಮೌಲ್ಯದಲ್ಲಿ 25 ಸಾವಿರ ರೂ.ವರೆಗೆ ವೈಯಕ್ತಿಕ ವಿದೇಶಿ ಉಡುಗೊರೆ ಪಡೆದುಕೊಂಡರೆ ಸರ್ಕಾರಕ್ಕೆ ತಿಳಿಸುವ ಅವಶ್ಯಕತೆ ಇರಲಿಲ್ಲ. ಇದೀಗ ಎಫ್​ಸಿಆರ್​ಎ ನಿಯಮಗಳಲ್ಲಿ ಮಾಡಲಾಗಿರುವ ಬದಲಾವಣೆಯ ಪ್ರಕಾರ ಈ ಮಿತಿಯನ್ನು ಈಗ 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. (ಏಜೆನ್ಸೀಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...