

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಸೋಮವಾರ(ನವೆಂಬರ್ 11) ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ(Vikram Misri) ಅವರ ಅಧಿಕಾರಾವಧಿಯನ್ನು 14 ಜುಲೈ 2026ರವರೆಗೆ ವಿಸ್ತರಿಸಿದೆ. 1989 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿಯಾದ ಮಿಶ್ರಿ ಜುಲೈ 15 ರಂದು ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.
ವಿಕ್ರಮ್ ಮಿಶ್ರಿ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನವೆಂಬರ್ 30 ರಂದು ಅಂದರೆ ನಿವೃತ್ತಿಯ ದಿನಾಂಕದ ನಂತರ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಎಫ್‌ಆರ್ 56 (ಡಿ)ರ ನಿಬಂಧನೆಗಳ ಪ್ರಕಾರ, ಜುಲೈ 14, 2026ರವರೆಗೆ ಅಥವಾ ಮುಂದಿನ ಆದೇಶದವರೆಗೆ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಶ್ರಿ ವಿಸ್ತರಿಸಲು ಅನುಮೋದನೆ ನೀಡಲಾಗಿದೆ. ನಿಬಂಧನೆಗಳು ಸಾರ್ವಜನಿಕ ಹಿತಾಸಕ್ತಿಯಿಂದ ನಿವೃತ್ತಿಯ ದಿನಾಂಕದ ನಂತರ ವಿದೇಶಾಂಗ ಕಾರ್ಯದರ್ಶಿಯ ಸೇವೆಯನ್ನು ವಿಸ್ತರಿಸಲು ಅವಕಾಶ ನೀಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.