More

    ಉತ್ತಮ ಬದುಕಿಗೆ ಅರಣ್ಯ ಸಂರಕ್ಷಣೆ ಅಗತ್ಯ

    ಸೊರಬ: ಸಹಸ್ರಾರು ಜೀವಜಂತುಗಳಿಗೆ, ಮನುಷ್ಯನ ಸ್ವಾಸ್ಥ ್ಯ ಬದುಕಿಗೆ ಸದಾ ಆಶ್ರಯವಾಗಿರುವ ಅರಣ್ಯ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಪರಿಸರ ಜಾಗೃತಿ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್ ಹೇಳಿದರು.
    ಪಟ್ಟಣದ ಹೊರವಲಯದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ಅರಣ್ಯ ಇಲಾಖೆ, ಕೆ.ವಿ.ಸುಬ್ಬಣ್ಣ ರಂಗಸಮೂಹ ಹೆಗ್ಗೋಡು ಹಾಗೂ ಸಾರ ಸಂಸ್ಥೆ ಹಮ್ಮಿಕೊಂಡಿದ್ದ ಪೊಡವಿಯ ಕೊಡವಿದರೆ ಶೀರ್ಷಿಕೆಯ ಕಾಡು ಸಂರಕ್ಷಣೆ ಕುರಿತ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಈ ಬಾರಿ ತೀವ್ರ ಮಳೆ ಕೊರತೆ ಎದುರಾಗಿದ್ದು ಅನೇಕ ಕಡೆ ಬೋರ್‌ವೆಲ್ ಸೇರಿ ಕೆರೆಕಟ್ಟೆ, ಹಳ್ಳಕೊಳ್ಳ, ನದಿಗಳಲ್ಲಿ ನೀರಿಲ್ಲದೆ ಬರಿದಾಗಿದೆ. ಕುಡಿಯುವ ನೀರಿಗೂ ತೊಂದರೆ ಎದುರಾಗಲಿದೆ. ಇದನ್ನು ಗಮನಿಸಿಯಾದರೂ ಜನರು ವೃಕ್ಷ ರಕ್ಷಣೆಗೆ ಮುಂದಾಗಬೇಕು. ಸ್ವಾರ್ಥ, ಲಾಲಸೆಯಿಂದ ದೂರವಾಗಿ ನಮ್ಮ ಆರೋಗ್ಯಕರ ಬದುಕನ್ನು ನಾವೇ ಸೃಷ್ಟಿಸಿಕೊಳ್ಳಬೇಕು ಎಂದರು.
    ಪರಿಸರ ಜಾಗೃತಿ ಟ್ರಸ್ಟ್ ಉಪಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಪರಿಸರ ಸಂರಕ್ಷಣೆ ವಿಷಯದಲ್ಲಿ ಇಲಾಖೆ, ಸಂಘ ಸಂಸ್ಥೆಗಳತ್ತ ಬೆರಳು ತೋರಿಸುವುದನ್ನು ಬಿಟ್ಟು ರಕ್ಷಣೆ ಕಾರ್ಯ ನಮ್ಮ ಆದ್ಯ ಕರ್ತವ್ಯ ಎಂದು ಭಾವಿಸಿ ಅರಣ್ಯ ಸಂರಕ್ಷಣೆಗೆ ಮುಂದಾಗಬೇಕು ಎಂದರು.
    ಶಾಲಾ ಮುಖ್ಯಶಿಕ್ಷಕ ಮಾರುತಿ ಮಾತನಾಡಿ, ಅರಣ್ಯ ರಕ್ಷಣೆಯ ಜತೆಗೆ ಶಾಲಾ ಪರಿಸರ ರಕ್ಷಣೆಯ ಹೊಣೆ ಶಿಕ್ಷಕ, ವಿದ್ಯಾರ್ಥಿಗಳದ್ದಾಗಿದ್ದು ಮಕ್ಕಳ ಜತೆಗೂಡಿ ಶಾಲಾ ಆವರಣದಲ್ಲಿ ವ್ಯವಸ್ಥಿತ ಸಸಿಗಳನ್ನು ಬೆಳೆಸಿ ಸಂರಕ್ಷಿಸಲಾಗುತ್ತಿದೆ ಎಂದರು.
    ರAಗಸಮೂಹ ತಂಡದಲ್ಲಿ ಶ್ರೀಪಾದ ಭಾಗವತ್, ಪ್ರಸನ್ನ ಹುಣಸೆಕೊಪ್ಪ, ಕೃಷ್ಣಕುಮಾರ್ ಖಂಡಿಕ, ಗಣಪತಿ ಹೆಗಡೆ ನಂದಿತಳೆ, ಶ್ರೀಧರ ಭಾಗವತ, ಕುಮಾರ್ ಸಾರ ಇದ್ದರು. ಅರಣ್ಯ ಇಲಾಖೆ ಅಽಕಾರಿಗಳು, ಶಾಲಾ ಸಹಶಿಕ್ಷಕರು, ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts