More

    ಸತ್ತ ಮೀನು ತೆರವು ಮಾಡದ ಅರಣ್ಯ ಇಲಾಖೆ

    ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಸೋಮೇಶ್ವರ ಕೆರೆಯಲ್ಲಿ ಸಾವಿರಾರು ಮೀನುಗಳು ಮೃತಪಟ್ಟು ಮೂರು ದಿನಗಳು ಕಳೆದರೂ ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ. ಇದರಿಂದ ಕೆರೆ ನೀರು ಮಲೀನಗೊಳ್ಳುತ್ತಿದೆ.


    ಬಿಆರ್‌ಟಿ ಅರಣ್ಯ ಪ್ರದೇಶದಲ್ಲಿ ಬಿ.ಆರ್.ಹಿಲ್ಸ್ ದೇವಸ್ಥಾನಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಇರುವ ಈ ಕೆರೆಯಲ್ಲಿ ಕಳೆದ ಸೋಮವಾರ ಸಾವಿರಾರು ಮೀನುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅರಣ್ಯ ಇಲಾಖೆಗೂ ಮಾಹಿತಿ ನೀಡಲಾಗಿದೆ. ಆದರೂ, ಅಧಿಕಾರಿಗಳು ಕೆರೆಗೆ ಭೇಟಿ ನೀಡಿ ಪರಿಶೀಲಿಸಿ ಮೀನುಗಳ ಸಾವಿಗ ಕಾರಣ ಏನು ಎಂಬುದನ್ನು ಪತ್ತೆಹಚ್ಚಿಲ್ಲ. ಅಲ್ಲದೇ, ಸತ್ತ ಮೀನುಗಳನ್ನು ತೆರವು ಮಾಡಿಲ್ಲ. ಇದರಿಂದ ಕೆರೆಯ ಸುತ್ತಮುತ್ತ ಪ್ರದೇಶದವರೆಗೂ ಕೆಟ್ಟ ವಾಸನೆ ಬರುತ್ತಿದೆ. ಈ ಕಲುಷಿತ ನೀರನ್ನೇ ವನ್ಯ ಪ್ರಾಣಿ- ಪಕ್ಷಿಗಳು ಕುಡಿಯುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಕಳೆದ ವರ್ಷ ಉತ್ತಮ ಮಳೆಯಾದ ಪರಿಣಾಮ ಕೆರೆ ತುಂಬಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದಾಗಿ ನೀರು ಖಾಲಿಯಾಗತೊಡಗಿತ್ತು. ಪರಿಣಾಮ ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಜತೆಗೆ ಕಳೆದ 3 ವರ್ಷದ ಹಿಂದೆ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಮೂಲಕ ಕೆರೆಯನ್ನು ಹೂಳು ತೆಗೆಸಿ ಪುನರುಜ್ಜಿವನಗೊಳಿಸಲಾಗಿತ್ತು.ತಾಲೂಕಿನ ಬಿಳಿಗಿರಿರಂಗನಬೆಟ್ಟ ಸೋಮೇಶ್ವರ ಕೆರೆಗೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಳೆಯಾಗಿರುವ ಕಾರಣ ಮೀನುಗಳು ಇರಲಿಲ್ಲ. ಕೆರೆಗೆ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸುವಂತೆ ಸಿಬ್ಬಂದಿಗೆ ಸೂಚಿಸಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts