ಕಾರವಾರ: ಕಸ್ತೂರಿ ರಂಗನ್ ವರದಿಯನ್ನಾಧರಿಸಿ ಹೊರಡಿಸಿದ ಅರಣ್ಯ (Forest) ಪರಿಸರ ಸೂಕ್ಷ್ಮ ವಲಯದ ಕರಡು ಅಧಿಸೂಚನೆಯನ್ನು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಸಿಂಗಳಿಕ ವಿಶೇಷ ಸಂರಕ್ಷಿತ ಅಭಯಾರಣ್ಯ ಘೋಷಣೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಂತೆ ಎಲ್ಲ ಎಂಪಿಗಳನ್ನು ಭೇಟಿಯಾಗಿ ಒತ್ತಾಯಿಸಲಿದ್ದೇವೆ ಎಂದು ಭಟ್ಕಳ ಅತಿಕ್ರಮಣ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರಾಮಾ ಮೊಗೇರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಆಧರಿಸಿ, ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಕೇಂದ್ರ ಮುಂದಾಗಿರುವುದು ಅಘಾತಕಾರಿಯಾಗಿದೆ. ಅದನ್ನು ಜಾರಿ ಮಾಡದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ. ವರದಿ ಜಾರಿಯಾದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವ ಲಕ್ಷಾಂತರ ಕುಟುಂಬಗಳು ಬೀದಿಗೆ ಬೀಳಲಿವೆ ಎಂದು ವಿವರಿಸಿದರು.
ಶಿವಮೊಗ್ಗ ಹಾಗೂ ಆ ಜಿಲ್ಲೆಗೆ ತಾಗಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಪ್ರದೇಶಗಳನ್ನು ಸಿಂಗಳಿಕ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಸಿದ್ದಾಪುರ, ಹೊನ್ನಾವರ ಹಾಗೂ ಭಟ್ಕಳ ಭಾಗಗಳಲ್ಲಿ ಅತಿಕ್ರಮಣ ಮಾಡಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳು ಜಮೀನು ಕಳೆದುಕೊಳ್ಳುವ ಆತಂಕವಿದೆ. ಅವರಿಗೆ ಅನ್ಯಾಯವಾಗಲಿದೆ ಎಂದರು.
forest-dwellers ಕಾಯ್ದೆ ಸರಳೀಕರಣ ಮಾಡಿ
ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿ ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆಯಲ್ಲಿ 75 ವರ್ಷಗಳ ದಾಖಲೆ ಬೇಕು ಎಂಬ ನಿಯಮವನ್ನು ಕೇಂದ್ರ ಸರ್ಕಾರ ಬದಲಿಸಬೇಕು. ಒಂದು ದಾಖಲೆ ಪಡೆದು ಎಸ್‌ಸಿ ಮತ್ತು ಎಸ್‌ಟಿಗಳಿಗೆ ಅರಣ್ಯ ಹಕ್ಕು ಕೊಡುವ ಅವಕಾಶವಿದ್ದು, ಅದನ್ನು ಇತರೆ ಪಾರಂಪರಿಕ ಅರಣ್ಯವಾಸಿಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ನಾಗೇಶ ದೇವಾಡಿಗ, ಸಲೀಲ್ ಶೇಖ್, ಕಯಾಂ ಕೋಲಾ, ಸಿದ್ದು ಪಾಟೀಲ, ಶಿವಾನಂದ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.
ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆhttps://www.vijayavani.net/husband-committed-suicide-in-front-of-his-wifes-house