

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ
ಉಳ್ಳೂರು-ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಹಾಗೂ ಕುಂದಾಪುರ ತಾಲೂಕಿನ ಸಹಕಾರ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಉಳ್ಳೂರು-74 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಉಳ್ಳೂರು-ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಹೆಬ್ಬಾರ್ ಉದ್ಘಾಟಿಸಿದರು. ಉಳ್ಳೂರು-74 ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ ಶೆಟ್ಟಿ ಕಟ್ಟಿನಬೈಲು, ಪಿಡಿಒ ಗೋಪಾಲ ದೇವಾಡಿಗ, ಸಹಕಾರಿ ಸಂಘದ ಉಪಾಧ್ಯಕ್ಷ ಗಣೇಶ ಶೆಟ್ಟಿ ಮಠದಜೆಡ್ಡು, ನಿರ್ದೇಶಕ ಚಂದ್ರಶೇಖರ ಶೆಟ್ಟಿ ತೊಂಬಟ್ಟು, ಶ್ರವಣ್ ಶೆಟ್ಟಿ, ರತ್ನಾಕರ ಮೊಗವೀರ, ರವಿ ನಾಯ್ಕ, ಪ್ರದೀಪಕುಮಾರ ಶೆಟ್ಟಿ ತೊಂಬಟ್ಟು, ಗಣೇಶ ಪೂಜಾರಿ, ಜ್ಯೋತಿ ಪೂಜಾರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಭಾಕರ ಆಚಾರ್ಯ ಅಂಸಾಡಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯು.ರತ್ನಾಕರ ಶೆಟ್ಟಿ, ಮುಖ್ಯಶಿಕ್ಷಕ ಪ್ರಕಾಶ ಕುಲಾಲ ಹಾಗೂ ಇನ್ನಿತರರು ಉಪಸ್ಥಿತರಿದ್ದರು.