More

    ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

    ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದ ಜೆಡ್ ಪಾಯಿಂಟ್ ಬಳಿ ಕಾಡ್ಗಿಚ್ಚಿನಿಂದಾಗಿ ನೂರಾರು ಎಕರೆ ಶೋಲಾ ಅರಣ್ಯ ಸುಟ್ಟು ಭಸ್ಮವಾಗಿದೆ.

    ಭದ್ರಾ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಸೋಮವಾರವೇ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಮಂಗಳವಾರ ಬೆಂಕಿಯ ಕೆನ್ನಾಲಿಗೆ ಇಡೀ ಗುಡ್ಡವನ್ನೇ ವ್ಯಾಪಿಸಿದೆ.
    ಜೆಡ್ ಪಾಯಿಂಟ್ ಸಮೀಪದ ಗುಡ್ಡದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿರುವುದರಿಂದ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಆದರೆ ನಿಂಯಂತ್ರಣಕ್ಕೆ ಬರುತ್ತಿಲ್ಲ. ಇನ್ನು ಕಾಡ್ಗಿಚ್ಚು ಕಾಣಿಸಿಕೊಂಡಿರುವ ಎಲ್ಲ ಜಾಗಕ್ಕೂ ಅಗ್ನಿಶಾಮಕ ದಳದ ವಾಹನ ಹೋಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ.
    ಅಪರೂಪದ ಪ್ರಾಣಿ, ಪಕ್ಷಿ, ಸಸ್ಯ ಸಂಕುಲ ಹೊಂದಿರುವ ಪ್ರದೇಶದಲ್ಲಿಯೇ ಕಾಡ್ಗಿಚ್ಚು ಕಾಣಿಸಿಕೊಂಡಿರುವುದರಿಂದ ಪ್ರಾಣಿ, ಪಕ್ಷಿಗಳು ಕಾಡ್ಗಿಚ್ಚಿಗೆ ಸುಟ್ಟು ಕರಕಲಾಗಿರುವ ಶಂಕೆ ಇದೆ. ಜೊತೆಗೆ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳೂ ಸುಟ್ಟುಹೋಗಿರುವ ಸಾಧ್ಯತೆಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts