ಅರಣ್ಯ ಹುತಾತ್ಮರಿಗೆ ಗೌರವ ಸಮರ್ಪಣೆ

ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲನಿಯ ಫಾರೆಸ್ಟ್ ನರ್ಸರಿ ಆವರಣದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಯಿತು.

ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ, ಜಿಲ್ಲಾಧಿಕಾರಿ ಬಿ.ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ವನ್ಯಜೀವಿ ಪರಿಪಾಲಕ ಮಲ್ಲೇಶಪ್ಪ ಇತರರು ಪುಷ್ಪಗುಚ್ಚ ಇರಿಸಿ ಗೌರವ ಸಲ್ಲಿಸಿದರು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಮತ್ತು ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ನ್ಯಾಯಾಧೀಶರಾದ ಜಿ.ಬಸವರಾಜ ಅವರು ಮಾತನಾಡಿ, ಅರಣ್ಯ ಹುತಾತ್ಮರ ಪಟ್ಟಿ ಬೆಳೆಯಬಾರದು. ಅದಕ್ಕಾಗಿ ಅವರಿಗೆ ಅಗತ್ಯ ಶಸ್ತ್ರಾಸ್ತ್ರಗಳನ್ನು ಪೂರೈಸಬೇಕು ಎಂದು ಸಲಹೆ ನೀಡಿದರು. ಉಪ ವಲಯಾರಣ್ಯಾಧಿಕಾರಿ, ಅರಣ್ಯ ರಕ್ಷಕರು, ವನ ಪಾಲಕರು ಇತರರು ಹಾಜರಿದ್ದರು.

 

Leave a Reply

Your email address will not be published. Required fields are marked *