More

    ಧೂಳಿನಿಂದ ಬಂಗಲೆ ರಕ್ಷಿಸಿಕೊಳ್ಳಲು ಸಂಚಾರ ನಿಷೇಧ: ಸಚಿವ ಆನಂದ್​ ಸಿಂಗ್ ವಿರುದ್ಧ ಜನಾಕ್ರೋಶ..!​

    ಬಳ್ಳಾರಿ: ಧೂಳಿನಿಂದ ತಮ್ಮ ಬಂಗಲೆ ರಕ್ಷಿಸಿಕೊಳ್ಳಲು ಅರಣ್ಯ ಸಚಿವ ಆನಂದ್​ ಸಿಂಗ್​ ಲಾರಿ ಮತ್ತು ಬಸ್ಸುಗಳ ಸಂಚಾರ ನಿಷೇಧಿಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

    ಸಚಿವರು ಕಳೆದ ವರ್ಷ ಹೊಸಪೇಟೆಯಲ್ಲಿ ಬೃಹತ್ ಬಂಗಲೆ ನಿರ್ಮಾಣ ಮಾಡಿದ್ದಾರೆ. ಆ ಬಂಗಲೆಗೆ ಧೂಳು ಹಿಡಿಯಬಾರದೆಂದು ಭಾರಿ ವಾಹನಗಳ ಮಾರ್ಗ ಬದಲಾವಣೆ ಮಾಡಿದ್ದಾರೆ. ಬೈಪಾಸ್ ರಸ್ತೆಯಲ್ಲಿ ಭಾರಿ ವಾಹನ ನಿಷೇಧ ಮಾಡಿದ್ದು, ಲಾರಿ ಸೇರಿದಂತೆ ಇತರೆ ಸರಕು ಸಾಗಣೆ ವಾಹನಗಳ ಸಂಚಾರದ ಮೇಲೆ ಪೊಲೀಸರು ನಿರ್ಬಂಧ ಹೇರಿದ್ದಾರೆ.

    ಇದನ್ನೂ ಓದಿ: ದಲಿತ ಶಾಸಕನ ಅಂತರ್ಜಾತಿ ವಿವಾಹ ಪ್ರಕರಣ: ಮಹತ್ವದ ತೀರ್ಪು ನೀಡಿದ ಮದ್ರಾಸ್​ ಹೈಕೋರ್ಟ್​!

    ಭಾರಿ ವಾಹನಗಳ ಸಂಚಾರ ತಡೆಗೆ ಹೊರವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಬ್ಯಾರಿಕೇಡ್ ಬಳಿ ಪೊಲೀಸರು ಹಗಲು–ರಾತ್ರಿ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸಂಚಾರ ನಿರ್ಬಂಧಿಸಿರುವ ಕಾರಣ ಭಾರಿ ವಾಹನಗಳು ಹೊಸಪೇಟೆ ನಗರದ ಮಧ್ಯದಿಂದ ಸಂಚಾರ ಮಾಡುತ್ತಿವೆ.

    ಈ ಹಿಂದೆ ಕೈಗಾರಿಕೆಗಳು, ಬಾಳೆ, ಭತ್ತ ಹಾಗೂ ಕಬ್ಬಿನ ಗದ್ದೆಗಳಿಂದ ಕೃಷಿ ಉತ್ಪನ್ನಗಳನ್ನು ಇದೇ ಮಾರ್ಗದಲ್ಲಿ ಲಾರಿಗಳಲ್ಲಿ ಸಾಗಿಸಲಾಗುತ್ತಿತ್ತು. ರಸ್ತೆ ಬದಲಿ ಮಾಡಿರುವ ಪೊಲೀಸರ ಕ್ರಮಕ್ಕೆ ರೈತರು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬೈಪಾಸ್ ರಸ್ತೆ ಇರುವುದೇ ಭಾರಿ ವಾಹನಗಳ ಸಂಚಾರಕ್ಕಾಗಿ. ಅಲ್ಲಿ ನಿರ್ಬಂಧ ಹೇರಿದ್ದು ಅಧಿಕಾರ ದುರುಪಯೋಗದ ಪರಮಾವಧಿಯಾಗಿದೆ ಎಂದು ಆರೋಪ ಕೇಳಿಬಂದಿದೆ. (ದಿಗ್ವಿಜಯ ನ್ಯೂಸ್​)

    ಗೋ-ಕಾರ್ಟಿಂಗ್​ ದುರಂತ: ವಿದ್ಯಾರ್ಥಿನಿ ಸಾವಿಗೆ ಕಾರಣ ತಿಳಿಸಿ, ಗಂಭೀರ ಆರೋಪ ಮಾಡಿದ ಕುಟುಂಬಸ್ಥರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts