ಹಾಸನ: ಆಕಸ್ಮಿಕ ಹೊತ್ತಿಕೊಂಡ ಬೆಂಕಿ ನಂದಿಸಲು ಹೋದ ಅರಣ್ಯ ಸಿಬ್ಬಂದಿಗಳು ಬೆಂಕಿಗೆ ಸಿಲುಕಿದಂತಹ ಘಟನೆ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಜೀರೋ ಟ್ರಾಫಿಕ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಸಕಲೇಶಪುರ ತಾಲ್ಲೂಕು ಪಶ್ಚಿಮಘಟ್ಟದ ಕಾಡುಮನೆ ಮಣಿಬೀಡು ದೇವಸ್ಥಾನ ಬಳಿ ಘಟನೆ ನಡೆದಿದೆ. ಘಟನೆಯಿಂದ ಅರಣ್ಯಾಧಿಕಾರಿ ಮಂಜುನಾಥ್ ಹಾಗೂ ಅರಣ್ಯ ರಕ್ಷಕ ಸುಂದರೇಶ್ ಗಂಭೀರ ಗಾಯ ಗಾಯಗೊಂಡಿದ್ದಾರೆ, ಇಬ್ಬರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ.
ಅರಣ್ಯ ವೀಕ್ಷಕ ತುಂಗೇಶ್ ಹಾಗೂ ಮಹೇಶ್ ಕೂಡ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡ ಅರಣ್ಯ ಸಿಬ್ಬಂದಿಗಳುನ್ನು 12 km ಕಾಡಿನಲ್ಲಿ ಹೊತ್ತುಕೊಂಡು ಬಂದು ಅಂಬ್ಯುಲೆನ್ಸ್ನಲ್ಲಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.