VIDEO | ಅರಣ್ಯ ಸಿಬ್ಬಂದಿಯನ್ನು ಬೆನ್ನಟ್ಟಿದ ಕಾಡಾನೆಗಳು

ಸಿದ್ದಾಪುರ: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುತ್ತಿದ್ದ ಸಂದರ್ಭ ಎರಡು ಕಾಡಾನೆಗಳು ಅರಣ್ಯ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರಡಿಗೋಡು ಗ್ರಾಮದ ಕಂಬೀರಂಡ ನಂಜಪ್ಪ ಎಂಬುವರ ತೋಟದಲ್ಲಿ ಕಾಡಾನೆ ಬೀಡುಬಟ್ಟಿರುವ ಬಗ್ಗೆ ಮಾಹಿತಿ ಪಡೆದ ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಹಾಗೂ ಸಿಬ್ಬಂದಿ ಸೋಮವಾರ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಏಕಾಏಕಾಗಿ ತಿರುಗಿ ಬಿದ್ದ ಎರಡು ಸಲಗಗಳು ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆಯಿಂದಾಗಿ ಸ್ಥಳೀಯರು ಭಯಭೀತರಾಗಿದ್ದಾರೆ. 

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…