More

    ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್​ ರೇವಣ್ಣಗೆ ಶಾಕ್​ ಕೊಟ್ಟ ವಿದೇಶಾಂಗ ಇಲಾಖೆ

    ನವದೆಹಲಿ: ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದು, ಇದರ ಬೆನ್ನಲ್ಲೇ ಪ್ರಜ್ವಲ್​ಗೆ ವಿದೇಶಾಂಗ ಇಲಾಖೆ ಬಿಗ್​ ಶಾಕ್ ಒಂದನ್ನು​ ನೀಡುವ ಮೂಲಕ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ವಿದೇಶಾಂಗ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಎಸ್​ಐಟಿ ಅಧಿಕಾರಿಗಳು ಪತ್ರ ಬರೆದಿದ್ದರು. ಇದರ ಬೆನ್ನಲೇ ಇದೀಗ ವಿದೇಶಾಂಗ ಸಚಿವಾಲಯವು, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಇದನ್ನೂ ಓದಿ: ಮಿನಿಬಸ್​ಗೆ ಲಾರಿ ಡಿಕ್ಕಿ; ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಏಳು ಮಂದಿ ಮಸಣಕ್ಕೆ, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಅವರು ಏಪ್ರಿಲ್​ 16ರಂದು ವಿದೇಶಕ್ಕೆ ಪಲಾಯನ ಮಾಡಿದ್ದು, ಎಸ್​ಐಟಿ ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಂಬಂಧ ಅವರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರಜ್ವಲ್​ಗೆ ಶೋಕಾಸ್ ನೋಟಿಸ್ ನೀಡಿದೆ. ಈ ನೋಟಿಸ್ ಮೂಲಕ ಪಾಸ್​ಪೋರ್ಟ್​ ರದ್ದುಗೊಳಿಸುವ ಬಗ್ಗೆ ಪ್ರಜ್ವಲ್​ಗೆ ಉತ್ತರ ಕೇಳಿದೆ. ಇದರಿಂದ ಪ್ರಜ್ವಲ್​ಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

    ಅಶ್ಲೀಲ ಪೆನ್​ಡ್ರೈವ್​ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿ ವಹಿಸಿದ್ದು, ಎಸ್​ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಪ್ರಜ್ವಲ್​​ಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ದೇಶದಲ್ಲಿದ್ದುಕೊಂಡೇ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ಕೆಲ ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಕಾಲಾವಕಾಶ ಮುಗಿದರೂ ಸಹ ಪ್ರಜ್ವಲ್​ ವಿಚಾರಣೆಗೆ ಹಾಜರಾಗಿರಲಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts