ಬಳ್ಳಾರಿ ಜಿಲ್ಲೆ ಬಾಣಂತಿಯರ ಸರಣಿ ಸಾವು; ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನಾ ತಂಡ|Formation of review team headed by IAS officers ರಚನೆ

vidhana soudha
Published on

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತು ಸರ್ಕಾರ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನಾ ತಂಡ(Formation of review team headed by IAS officers) ರಚಿಸಿದೆ.

ಕೆಎಸ್‌ಎಂಎಸ್‌ಸಿಎಲ್ ಟೆಂಡರ್(KSMSCL TENDER) ಮೂಲಕ ಔಷಧ ಖರೀದಿ ಮತ್ತು ಎಂಪ್ಯಾನಲ್ಡ್ ಲ್ಯಾಬೋರೇಟರಿಗಳಿಗೆ ಔಷಧ ಮಾದರಿ ಒಳಪಿಸುವಲ್ಲಿ ಆಗಿರುವ ನಿಯಮ ಉಲ್ಲಂಘನೆಗಳ ಬಗ್ಗೆ ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪಗಳನ್ನು ಎಸಗಿದ ಅಧಿಕಾರಿಗಳ ಮೇಲೆ ಜವಾಬ್ದಾರಿ ನಿಗದಿ ಮಾಡುವ ಬಗ್ಗೆ ಈ ತಂಡ ಪರಿಶೀಲನೆ ನಡೆಸಲಿದೆ.

ಅಲ್ಲದೆ, ಕೆಎಸ್‌ಎಂಎಸ್‌ಸಿಎಲ್‌ನಲ್ಲಿ ಈಗಿರುವ ಪ್ರೊಸೀಸರ‌್ಗಳನ್ನು ಸೇರಿದಂತೆ ಇತ್ಯಾದಿ ಅಂಶಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಈ ತಂಡ ರಚಿಸಲಾಗಿದೆ. ತಂಡದಲ್ಲಿ ಕರ್ನಾಟಕ

ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಕನಗವಲ್ಲಿ(M Kanagavalli), ಔಷಧ ನಿಯಂತ್ರಣ ಇಲಾಖೆ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಮೈಕ್ರೋಬಯಾಲಜಿಸ್ಟ್ ಡಾ.ಅಸೀಮಾ ಬಾನು ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಗಳಿಂದ ನಾಮ ನಿರ್ದೇಶಿತ ಒಬ್ಬ ಹಿರಿಯ ಾರ್ಮಾಕಾಲಜಿ ಪ್ರಾಧ್ಯಾಪಕರು ಈ ತಂಡದಲ್ಲಿದ್ದಾರೆ. ಈ ತಂಡ ಐದು ದಿನಗಳ ಒಳಗೆ ಸರ್ಕಾರದ ಅಭಿವೃಧ್ಧಿ ಆಯುಕ್ತರ ಅಧ್ಯಕ್ಷತೆಯ ಸಮಿತಿಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net