ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಪ್ರಮುಖ ಟಿಡಿಪಿ ನಾಯಕರಿಗೆ ಗೃಹಬಂಧನ

ಹೈದರಾಬಾದ್​: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಚಂದ್ರಬಾಬು ನಾಯ್ಡು ಹಾಗೂ ಪಕ್ಷದ ಹಲವು ಮುಖಂಡರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಇವರು ಪಾಲ್ಗೊಳ್ಳುವುದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​ ಪಕ್ಷ ನಡೆಯನ್ನು ವಿರೋಧಿಸಿ ಅಮರಾವತಿಯಿಂದ 240 ಕಿ.ಮೀ. ದೂರದಲ್ಲಿರುವ ಆತ್ಮಕೂರ್​ಗೆ ಇಂದು ಟಿಡಿಪಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು, ಅವರ ಪುತ್ರ ನಾರಾ ಲೋಕೇಶ್​, ಟಿಡಿಪಿ ನಾಯಕರಾದ ದೇವಿನೇನಿ ಅವಿನಾಶ್​, ಕೇಸಿನೇನಿ ನಾನಿ ಮತ್ತು ಭೂಮ ಅಖಿಲಪ್ರಿಯ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಗೃಹಬಂಧನ ವಿಧಿಸಿರುವುದನ್ನು ವಿರೋಧಿಸಿ ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ಇಂದು ರಾತ್ರಿ 8 ಗಂಟೆಯವರೆಗೆ ಉಪವಾಸವಿದ್ದು ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.

ವೈಎಸ್​ಆರ್​ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಟಿಡಿಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅಡಳಿತ ಪಕ್ಷದ ಕಾರ್ಯಕರ್ತರ ಹಲ್ಲೆಯಿಂದ ಟಿಡಿಪಿಯ 8 ಕಾರ್ಯಕರ್ತರು ಮೃತಪಟ್ಟಿದ್ದಾರೆ. ಗುಂಟೂರು ಜಿಲ್ಲೆಯ ಪಾಲನಾಡು ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಹಲ್ಲೆಗಳು ನಡೆದಿವೆ. ಕಳೆದ ಮೂರು ತಿಂಗಳಲ್ಲಿ ಸುಮಾರು 500 ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂದು ಟಿಡಿಪಿ ಆರೋಪಿಸಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *