21.7 C
Bengaluru
Tuesday, January 21, 2020

ಇಬ್ಬರು ರಾಜಕೀಯ ನಾಯಕರ ಸಾವು ಕಂಡ ದೆಹಲಿ: ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ರಾಮ್ ಗಾರ್ಗ್ ನಿಧನಕ್ಕೆ ಪ್ರಧಾನಿ ಸಂತಾಪ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ದೆಹಲಿ ಬಿಜೆಪಿಯ ಮಾಜಿ ಅಧ್ಯಕ್ಷ, ಶಾಸಕ ಮತ್ತು ಸಂಘದ ಹಿರಿಯ ಸಹಾಯಕ ಮಾಂಗೆ ರಾಮ್ ಗರ್ಗ್(82) ಅವರು ಭಾನುವಾರ ಬೆಳಗ್ಗೆ 7.30ಕ್ಕೆ ನಿಧನರಾಗಿದ್ದಾರೆ.

ವೃತ್ತಿಯಲ್ಲಿ ಹಲ್ವಾಯ್ ಆಗಿದ್ದ ಅವರು 2003 ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕೆಲವು ಚಿಕಿತ್ಸೆಗಳಿಗೆ ಒಳಗಾಗಿದ್ದರು. ಆರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಉತ್ತರ ದೆಹಲಿಯ ಶ್ರೀ ಬಾಲಾಜಿ ಆಕ್ಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ರಾಮ್ ಗಾರ್ಗ್ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕಾಗಿ ದೆಹಲಿಯ ಅಶೋಕ್‌ ವಿಹಾರ್‌ ಎರಡನೇ ಹಂತದ ನಿವಾಸ್‌ ಸ್ಥಾನದಲ್ಲಿ 11.30ವರೆಗೂ ಇಡಲಾಗಿತ್ತು. ಬಳಿಕ ಅವರ ನಿವಾಸದಿಂದ ದೆಹಲಿ ಬಿಜೆಪಿ ಮುಖ್ಯ ಕಚೇರಿಗೆ ಸ್ಥಳಾಂತರಿಸಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಾಂಗೆ ರಾಮ್ ತಮ್ಮ ದೇಹವನ್ನು ದಾದಿಚಿ ದೇಹ್ ಡಾನ್ ಸಮಿತಿಗೆ ನೀಡುವಂತೆ ಪ್ರತಿಜ್ಞೆ ಮಾಡಿದ್ದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಧಾನಿ ನರೇದ್ರ ಮೋದಿ ಮಾಂಗೆ ರಾಮ್‌ ಸಾವಿಗೆ ಸಂತಾಪ ಸೂಚಿಸಿದ್ದು, ಶ್ರೀ ಮಾಂಗೆ ರಾಮ್‌ ಗರ್ಗ್‌ ಜಿ ಅವರು ದೆಹಲಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರು ಮತ್ತು ಅವರು ನಗರದ ಜನರಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿಯನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದರೊಂದಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಕೂಡ ಟ್ವೀಟ್‌ ಮಾಡುವ ಮೂಲಕ ಮಾಂಗೆ ರಾಮ್‌ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...