More

    ‘ನಾನು ಬಿಜೆಪಿ ಸೇರುತ್ತೇನೆ ಎಂದು‌ ಹೇಳಿರುವುದು’….. : ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ !

    ಬೆಂಗಳೂರು: ಸಿದ್ದರಾಮಯ್ಯನವರು ಬಿಜೆಪಿಗೆ ಬಂದರೂ ಅಚ್ಚರಿಯಿಲ್ಲ ಎಂದು ಈ ಹಿಂದೆ ಕೆ.ಎಸ್​.ಈಶ್ವರಪ್ಪ ಹೇಳಿದ್ದರು. ಜೆಡಿಎಸ್​ ಮುಖಂಡ ಜಿ.ಟಿ.ದೇವೇಗೌಡರು ಬಿಜೆಪಿಯತ್ತ ಹೆಚ್ಚಿನ ಒಲವು ತೋರಿಸುತ್ತಿರುವ ಬಗ್ಗೆ 2019ರ ಸೆಪ್ಟೆಂಬರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದ ಅವರು, ಜಿ.ಟಿ.ದೇವೇಗೌಡರಷ್ಟೇ ಅಲ್ಲ, ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯನವರು ಬಿಜೆಪಿಗೆ ಬಂದರೂ ಅಚ್ಚರಿಯಿಲ್ಲ ಎಂದು ಹೇಳಿದ್ದರು.

    ಮೂರ್ನಾಲ್ಕು ದಿನಗಳ ಹಿಂದೆ ಮಾಜಿ ಸಚಿವ, ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರ ಇದೇ ಮಾತನ್ನು ಪುನರುಚ್ಚರಿಸಿದ್ದರು. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರು ಬಿಜೆಪಿ ಸೇರುತ್ತಾರೆ ಎಂದು ಹೇಳಿದ್ದರು.
    ಈ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್​ ಮಾಡಿದ್ದಾರೆ. ಬಿಜೆಪಿ ನನ್ನ ಎಲ್ಲ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ನಾನು ಬಿಜೆಪಿ ಸೇರಲು ಸಾಧ್ಯವೇ. ಇದೊಂದು ಮೂರ್ಖತನದ ಹೇಳಿಕೆ ಎಂದು ಹೇಳಿದ್ದಾರೆ.

    ನಾನು ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿನಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಿದ್ದೇನೆ. ಆದರೆ ಬಿಜೆಪಿ ಇದಕ್ಕೆಲ್ಲ ವಿರುದ್ಧವಾಗಿದೆ.

    ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇಪದೆ ಪಕ್ಷ ಬದಲಾವಣೆ ಮಾಡುವ ಸನ್ನಿವೇಶ ಬರುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಬಾದಾಮಿ ಕ್ಷೇತ್ರದಲ್ಲಿ 500 ಕೋಟಿ ರೂ.ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೇನೆ. ಅದಿನ್ನೂ ಅನುಮೋದನೆಗೊಂಡಿಲ್ಲ. ಆಗಲೇ ಬಿಜೆಪಿಯ ಕೆಲ ನಾಯಕರು ನಾವು ಬಾದಾಮಿಗೆ 650 ಕೋಟಿ ರೂ.ಕೊಟ್ಟಿದ್ದೇವೆಂದು ಹೇಳುತ್ತ ಪ್ರಚಾರ ಶುರುಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ದೇಶೀಯ ಷೇರು ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ ನಷ್ಟ; ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಸೂಚ್ಯಂಕ ನಿಫ್ಟಿ ಕುಸಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts