Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಸೆ.25ರಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ

Saturday, 22.09.2018, 9:40 AM       No Comments

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್​ ಮುಂದಾಗಿದ್ದು, ಸೆಪ್ಟೆಂಬರ್​ 25 ರಂದು ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳುವ ಕುರಿತು ಸಿದ್ದರಾಮಯ್ಯ ಅವರು ಮಾಸ್ಟರ್​ಪ್ಲ್ಯಾನ್​ ರೂಪಿಸುತ್ತಿದ್ದಾರೆ.

ಶುಕ್ರವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮುಖಂಡರು ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್ ಹಾಜರಿದ್ದು ವಿಚಾರ ವಿನಿಮಯ ಮಾಡಿಕೊಂಡರು.

ದೋಸ್ತಿಗಳ ಒಗ್ಗಟ್ಟಿನ ಮಂತ್ರ, ಸಂಯಮ ತಂತ್ರ

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಇಂದು

Leave a Reply

Your email address will not be published. Required fields are marked *

Back To Top