ಸಿದ್ದರಾಮಯ್ಯನವರನ್ನು ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಿದರೆ ಮಾತ್ರ ದೋಸ್ತಿ ಸರ್ಕಾರ ಉಳಿಯುತ್ತದೆ ಎಂದ ಶೋಭಾ ಕರಂದ್ಲಾಜೆ

ಚಿಕ್ಕೋಡಿ: ನರೇಂದ್ರ ಮೋದಿಯವರನ್ನು ಹೀಯಾಳಿಸುತ್ತಿರುವ ಸಿದ್ದರಾಮಯ್ಯನವರನ್ನು ನಿಮ್ಹಾನ್ಸ್​ಗೆ ದಾಖಲಿಸಬೇಕು ಎಂದು ಬಿಜೆಪಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಗಾದಿಯಿಂದ ಕೆಳಗೆ ಇಳಿಸಿ, ತಾವು ಸಿಎಂ ಆಗಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ನಿಮ್ಹಾನ್ಸ್​ಗೆ ಸೇರಿಸಿದರೆ ಮಾತ್ರ ಸಮ್ಮಿಶ್ರ ಸರ್ಕಾರ ಉಳಿಯುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರಿಗೆ ಬುದ್ಧಿ ಭ್ರಮಣೆಯಾಗಿದೆ. ಅವರೇ ನಾಲಾಯಕ್​ ಮುಖ್ಯಮಂತ್ರಿ. ಸಿದ್ದರಾಮಯ್ಯನವರೇ ಜಾತಿ ಒಡೆಯಲು ಪ್ರಯತ್ನ ಮಾಡಿದರು. ಇಂಥವರಿಂದ ನರೇಂದ್ರ ಮೋದಿಯವರು ಪಾಠ ಕಲಿಯಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.