ಶಿವಮೊಗ್ಗಕ್ಕೆ ಹೊರಟ ಬಿಎಸ್​ವೈ... ಸ್ವಕ್ಷೇತ್ರ ಶಿಕಾರಿಪುರದಲ್ಲಿ ವಾಸ್ತವ್ಯ

bsy
Published on

ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಇಂದು(ಆಗಸ್ಟ್​ 27) ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿರುವ ಬಿಎಸ್​​ವೈ, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು-ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಇಂದು ತಮ್ಮ ಹೊಸ ಕಾರಿನಲ್ಲಿ ಶಿವಮೊಗ್ಗಕ್ಕೆ ಪ್ರವಾಸ ಹೊರಟಿರುವ ಯಡಿಯೂರಪ್ಪ, ರಾತ್ರಿ ತಮ್ಮ ಶಿವಮೊಗ್ಗ ನಿವಾಸದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ (ಆಗಸ್ಟ್​ 28) ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮತ್ತೆ ಆಗಸ್ಟ್​ 29 ರ ಭಾನುವಾರ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳಲಿರುವ ಯಡಿಯೂರಪ್ಪ, ಅಲ್ಲಿಯೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಭಾನುವಾರ ಮತ್ತು ಸೋಮವಾರ ಶಿಕಾರಿಪುರದಲ್ಲೇ ವಾಸ್ತವ್ಯ ಮಾಡಲಿದ್ದಾರೆ.

ತದನಂತರ ಪಕ್ಷದ ಸಂಘಟನೆಗಾಗಿ ರಾಜ್ಯ ಪ್ರವಾಸ ಮಾಡುವ ಬಗ್ಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರೊಂದಿಗೆ ಚರ್ಚೆ ಮಾಡಿ, ಮುಂದಿನ ರೂಪುರೇಷೆಗಳನ್ನು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net