More

  ದೆಹಲಿಯಿಂದ ಬೆಂಗಳೂರಿಗೆ ಮರಳಿದ ಮಾಜಿ ಸಿಎಂ ಬಿಎಸ್​ವೈ; ಬರುತ್ತಿದ್ದಂತೆ ಹೇಳಿದ್ದೇನು?

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗವಷ್ಟೇ ರಾಷ್ಟ್ರ ರಾಜಧಾನಿ ದೆಹಲಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಮರಳಿದ್ದಾರೆ. ನಗರಕ್ಕೆ ಮರಳುತ್ತಿದ್ದಂತೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ದೆಹಲಿಯಲ್ಲಿನ ಮಾತುಕತೆ ಕುರಿತು ಮಾಹಿತಿ ನೀಡಿದರು.

  ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ದೆಹಲಿ ಭೇಟಿಯಲ್ಲಿ ವಿಶೇಷವೇನೂ ನಡೆದಿಲ್ಲ ಎಂಬ ಸಂಗತಿಯನ್ನು ಸುದ್ದಿಗಾರರ ಜತೆ ಹಂಚಿಕೊಂಡರು. ನಾಲ್ಕು ರಾಜ್ಯಗಳ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದೆ ಎಂದೂ ತಿಳಿಸಿದರು.

  ಇದನ್ನೂ ಓದಿ: ನಾನು ಹೋದಾಗ ನೀವು ನನ್ನನ್ನು ಮಿಸ್ ಮಾಡ್ಕೊಳ್ತೀರಿ: ಶಿವರಾಜ್ ಸಿಂಗ್ ಚೌಹಾಣ್​

  ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ‌ದ ಬಗ್ಗೆ ದೆಹಲಿಯಲ್ಲಿ ಯಾವುದೇ ಪ್ರಸ್ತಾಪ ನಡೆದಿಲ್ಲ. ಯಾವಾಗ ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತಾರೆ ಅಂತ ನನಗೆ ಮಾಹಿತಿ ಇಲ್ಲ ಎಂದ ಅವರು, ವಿಜಯೇಂದ್ರ ಆಯ್ಕೆ ಕುರಿತ ಪ್ರಶ್ನೆಗೆ ಗೊತ್ತಿಲ್ಲ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.

  ಶಿವಮೊಗ್ಗದಲ್ಲಿನ ಗಲಭೆ ಕುರಿತಂತೆಯೂ ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗದಲ್ಲಿ ಇಂತಹ ಗಲಾಟೆ ನಡೆಯಬಾರದಿತ್ತು. ಹಿಂದೆಂದೂ ರೀತಿ ನಡೆದಿಲ್ಲ, ಇದೀಗ ನಡೆದಿರುವುದು ದುರದೃಷ್ಟಕರ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಬಳಿಕ ಮಾತನಾಡುವುದಾಗಿ ಹೇಳಿ ತೆರಳಿದರು.

  ಸೂಪರ್​ ಮಾರ್ಕೆಟ್​ನಲ್ಲಿ ಫ್ರಿಡ್ಜ್ ಡೋರ್ ತೆರೆಯುತ್ತಿದ್ದಂತೆ ಶಾಕ್​; ನಾಲ್ಕು ವರ್ಷದ ಬಾಲಕಿ ಸಾವು

  ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯಲು ಸರ್ಕಾರದ ಚಿಂತನೆ: ಇದನ್ನು ವಿರೋಧಿಸಿ ನೂರಾರು ಮಹಿಳೆಯರ ಅಹೋರಾತ್ರಿ ಪ್ರತಿಭಟನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts