More

    ನಾಳೆ(ಏ.4) ಮಾಜಿ ಸಿಎಂ ಎಚ್ಡಿಕೆ ನಾಮಪತ್ರ ಸಲ್ಲಿಕೆ: ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ ನೋಡಿ…!!

    ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಏ.4ರಂದು ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
    ಬೆಳಗ್ಗೆ 9 ಗಂಟೆಗೆ ಅರ್ಕೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 9.30ಕ್ಕೆ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ, ಸಮಯ ಬೆಳಿಗ್ಗೆ 9.45ಕ್ಕೆ ಲಕ್ಷ್ಮೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಪೂಜೆ, 10.15ಕ್ಕೆ ಮಂಡ್ಯ ನಗರದಲ್ಲಿ ಕಾವೇರಿ ಮಾತೆ, ಸರ್ ಎಂ.ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಡಾ.ಬಾಬೂ ಜಗಜೀವನ್ ರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

    ಬಳಿಕ ನಗರದ ಮಂಡ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸುವವರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಜೆಡಿಎಸ್ಯು ವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮೈಸೂರಿನ ಬಿಜೆಪಿ ಅಭ್ಯರ್ಥಿ ಯಧುವೀರ್ ಒಡೆಯರ್ ಸೇರಿದಂತೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts