More

    ಕರೊನಾ ಸೋಂಕಿತ ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ

    ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ ! ಕುಮಾರಸ್ವಾಮಿಯಂತಹ ಪ್ರಭಾವೀ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗುಲಿದ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು ? ಎಂಬ ಮಾತು ಕೇಳಿ ಬರತೊಡಗಿದೆ.

    ಅಂದ ಹಾಗೆ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿಯೇ ಬೆಂಗಳೂರಿಗೆ ಮರಳಿದವರು ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ.

    ಇದನ್ನೂ ಓದಿ: ಕೆನಡಾಗೆ ಹಾರಲಿದೆ ಅಪಘಾತಕ್ಕೀಡಾಗಿದ್ದ ಬೀದಿನಾಯಿ!; ವಿದೇಶಿ ಮಹಿಳೆಯಿಂದ ಬಳ್ಳಾರಿಯ 2 ವರ್ಷದ ಶ್ವಾನ ದತ್ತು

    ವೈದ್ಯರ ಬಳಿ ಮಾತುಕತೆ ನಡೆಸಿ, ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪಿಲ್ಲ. ಈ ವಿಷಯದಲ್ಲಿ ರಿಸ್ಕ್ ಬೇಡ, ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗಿ ಎಂದವರು ಹೇಳಿದ್ದಾರೆ. ಹೀಗಾಗಿ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಕುಮಾರಸ್ವಾಮಿ ಅವರು, ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ‘ಬೆಡ್ ಇಲ್ಲ’ ಎಂಬ ಉತ್ತರ ಸಿಕ್ಕಿದೆ.

    ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಅಲ್ಲಿ ಬೆಡ್ ಸಿಕ್ಕಿದೆ.

    ಆದರೆ ಬೆಡ್ ಸಿಕ್ಕರೂ ಮಾಜಿ ಸಿಎಂ ತಕ್ಷಣ ಅಡ್ಮಿಟ್ ಆಗಲು ಸಾಧ್ಯವಾಗಿಲ್ಲ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿತ್ತು. ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ಅಪಾಯವಾದ್ದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ, ಈಗ ಕ್ಯಾಮೆರಾ ಮುಂದೆ ಕೂತಿದ್ದಾರೆ. ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರಮೇಶಗೌಡ ಮಾಹಿತಿ ನೀಡಿದ್ದಾರೆ.

    ಸಿಡಿ ಪ್ರಕರಣ : ಗೋಕಾಕ್​ಗೆ ತೆರಳಿದ ಎಸ್​ಐಟಿ ಅಧಿಕಾರಿಗಳು… ರಮೇಶ್ ಜಾರಕಿಹೊಳಿಗೆ ನೋಟೀಸ್ !

    ಹುಷಾರ್ ! ಕರೊನಾ ವೈರಸ್ ಗಾಳಿಯ ಮೂಲಕ ಹರಡುತ್ತೆ ಎನ್ನುತ್ತಿದೆ ತಜ್ಞರ ವರದಿ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts