More

    ಮಿಣಿ ಮಿಣಿ ಪೌಡರ್ ಟ್ರೋಲ್​ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ‘ಮಿಣಿ ಮಿಣಿ ಪೌಡರ್’ ದೊಡ್ಡ ಸದ್ದು ಮಾಡುತ್ತಿದ್ದು, ಈ ಪದ ಬಳಸಿ ವ್ಯಾಪಕ ಅಪಹಾಸ್ಯಕ್ಕೆ ಈಡಾಗುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ ಹೇಡಿ ಕೆಲಸ ಮಾಡುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂದು ನಡೆಯುತ್ತಿ ರುವುದು ಕುಟಿಲ ರಾಜಕಾರಣ. ಅದರ ಭಾಗವೇ ಕೊಂಕು, ಟ್ರೋಲ್​ಗಳು.

    ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಗೇಲಿ, ಅಪಹಾಸ್ಯದ ತಂತ್ರದ ಮೂಲಕ ನಾಯಕನ ಹನನಕ್ಕೆ ನಿಲ್ಲುತ್ತಾರೆ. ನಾನು ಸುಳ್ಳಾಡಿಲ್ಲ, ನಿಂದನಾತ್ಮಕ ಪದ ಬಳಸಿಲ್ಲ. ಪತ್ರಿಕೆಯೊಂದರ ವರದಿ ಓದಿ ಸತ್ಯ ಮಾತಾಡಿದ್ದೇನೆ. ಆದಿತ್ಯ ‘ರಾವ್’ ಉಗ್ರನ ರಕ್ಷಣೆಗೆ ನಿಂತಿರುವ ಬಿಜೆಪಿ ನನ್ನ ಸತ್ಯದ ಮಾತನ್ನೇ ಗೇಲಿ ಮಾಡುತ್ತಿದೆ.

    ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ. ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದ್ದಲ್ಲವೇ. ಅದಕ್ಕೇ ಅವರಿಗೆ ಕನ್ನಡದ ಪದಗಳು ತಾತ್ಸಾರ ಎಂದು ಕಿಡಿಕಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts