More

    ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ಅವರವರ ವೈಯಕ್ತಿಕ ಆಯ್ಕೆಗಳಾಗಿವೆ. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಸಿದ್ದರಾಮಯ್ಯ ಅವರು ಹೇಳಿದರು.

    ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ.

    ಇದನ್ನೂ ಓದಿ: ಮಗಳ ಮದುವೆಗೆ ಸಾಲ ಮಾಡಿ ಪ್ರಾಣ ಬಿಟ್ಟ ಹೆತ್ತವರು; ಮನನೊಂದು ಮಗಳು ಕೂಡಾ ಪ್ರಾಣ ತ್ಯಾಗ

    ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.

    ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್​ ಮಾಲಕ ಟೀಕಾ ಪ್ರಹಾರ ನಡೆಸಿದ್ದಾರೆ.

    ಮಗುವಿನ ಚಿಕಿತ್ಸೆಗೆ ಅಪರಿಚಿತನಿಂದ 11.6 ಕೋಟಿ ರೂ. ನೆರವು: ಕೊನೆಗೂ ಸಿಕ್ತು ಪುಣ್ಯಾತ್ಮನ ಸುಳಿವು!

    ಸುಕೇಶ್​ ಜೈಲು ಕೋಣೆಯ ಮೇಲೆ ರೇಡ್​: ಐಷಾರಾಮಿ ವಸ್ತುಗಳು ಪತ್ತೆ, ಕಣ್ಣೀರಾಕಿದ ಮಹಾವಂಚಕ

    ಗಂಡನ ತಂಗಿಯನ್ನೇ ಮದುವೆಯಾದ 2 ಮಕ್ಕಳ ತಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts