More

    ಹ್ಯಾಕರ್ ಶ್ರೀಕಿ ಪ್ರಾಣಕ್ಕೆ ಅಪಾಯವಿದೆ, ಸೂಕ್ತ ಭದ್ರತೆ ಕೊಡಿ: ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

    ಬೆಂಗಳೂರು: ಬಿಟ್ ಕಾಯಿನ್ ಹಗಣಕ್ಕೆ ಸಂಬಂಧಿಸಿದಂತೆ ದಿನೇದಿನೆ ಬೆಳವಣಿಗೆಗಳು ಆಗುತ್ತಿದ್ದು, ಪ್ರಕರಣ ಕಗ್ಗಂಟಾಗುವ ಲಕ್ಷಣಗಳು ಗೋಚರಿಸಿವೆ. ಈ ಮಧ್ಯೆ ಪ್ರಕರಣದ ಕೇಂದ್ರ ಬಿಂದು ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಪ್ರಾಣಕ್ಕೆ ಅಪಾಯವಿದೆ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವೊಂದು ಹೊರಹೊಮ್ಮಿದೆ.

    ಅಂದಹಾಗೆ ಇಂಥದ್ದೊಂದು ಆತಂಕ ವ್ಯಕ್ತಪಡಿಸಿರುವುದು ಬೇರಾರೂ ಅಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿಸಿರುವ ‘ಬಿಳಿ ಕಾಲರ್ ಅಪರಾಧ’. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್​ವರ್ಡ್ ಸೇರಿ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

    ಇದನ್ನೂ ಓದಿ: ಹೊಸದುರ್ಗದಲ್ಲಿ ಮತ್ತೆ ಬಲವಂತದ ಮತಾಂತರ; ಮನೆಯಲ್ಲಿನ ದೇವರ ಫೋಟೋ ಹೊರಹಾಕಿಸಿ, ಚರ್ಚ್​​ಗೆ ಬರಲು ಒತ್ತಾಯ

    ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಶಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ. ಹೀಗಾಗಿ ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ ಯಾನೆ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು‌ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂಬುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

    ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಬೆಡ್​ ಕೇಳಿದ ನಟಿಗೆ ಸಿಕ್ಕಿದ್ದು ಅರ್ಧಮಂಚ; ಒಂದು ಕೊಟ್ಟು ಇನ್ನೊಂದು ಕೊಟ್ಟಿಲ್ಲ ಎಂದು ಬೇಸರ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts