ಮಾಜಿ ಸಿಎಂ ಸಿದ್ದರಾಮಯ್ಯರೇ ಆಪರೇಷನ್​ ಜನಕ: ಕೆ.ಎಸ್​.ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರೇ ಆಪರೇಷನ್​ ಜನಕ ಎಂದು ಬಿಜೆಪಿ ಮುಖಂಡ ಕೆ.ಎಸ್​. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂತಹ ಸರ್ಕಾರವನ್ನು ಎಂದೂ ನೋಡಿರಲಿಲ್ಲ. ಆಪರೇಷನ್ ಕಮಲ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಶಾಸಕರಿಂದಲೇ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದವರು. ಅವರು ಕಾಂಗ್ರೆಸ್​ಗೆ ಬಂದಾಗಲೇ ಆಪರೇಷನ್ ಶುರುವಾಗಿದ್ದು, ಅಂದು ಕಾಂಗ್ರೆಸ್​ ಸೇರಲು ಸಿದ್ದರಾಮಯ್ಯ ಹಣ ತೆಗೆದುಕೊಂಡಿದ್ದರು. ಹಾಗಾಗಿ ಅವರ ವಿರುದ್ಧವೂ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಆಪರೇಷನ್​ ಕಮಲ ಕುರಿತು ಬಿಡುಗಡೆಯಾಗಿರುವ ಆಡಿಯೋ ಸತ್ಯವೋ ಅಥವಾ ಸುಳ್ಳೊ ಎಂಬುದರ ಬಗ್ಗೆ ತನಿಖೆ ಆಗಬೇಕು. ಆದರೆ, ತನಿಖೆ ಯಾರಿಂದ ಆಗಬೇಕು ಎಂಬುದು ಮುಖ್ಯ, ಕಳ್ಳನ ಕೈಗೆ ಬೀಗದ ಕೈ ಕೊಟ್ಟಂತೆ ಎಂದಿದ್ದಕ್ಕೆ ಆಡಳಿತ ಪಕ್ಷಕ್ಕೆ ಆಘಾತವಾಗಿರಬಹದು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಬೇಕು. ಆದಷ್ಟು ಬೇಗ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. (ದಿಗ್ವಿಜಯ ನ್ಯೂಸ್​)