

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಈ ಕೂಡಲೇ ರಾಜೀನಾಮೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಜನಧ್ವನಿ ಜಾಥಾಗೆ ಚಾಲನೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ಈ ಕಾಮಕಾಂಡ ಇಡೀ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ-ಮರ್ಯಾದೆ ಇರೋ ಸರ್ಕಾರ ಕೂಡಲೇ ರಾಜೀನಾಮೆ ತೆಗೆದುಕೊಂಡು ಎಫ್ಐಆರ್ ದಾಖಲಿಸಬೇಕು. ಮನುಷ್ಯನ ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಕೂಡಲೇ ರಾಜೀನಾಮೆ ತೆಗೆದುಕೊಳ್ಳಬೇಕೆಂದರು.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಜನಧ್ವನಿ ಜಾಥಾ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್ ಮತ್ತಿತರ ನಾಯಕರು ಭಾಗವಹಿಸಿದರು. (ದಿಗ್ವಿಜಯ ನ್ಯೂಸ್)