More

    ಅವನು ತೇಜಸ್ವಿ ಅಲ್ಲ… ಅಮವಾಸ್ಯೆ; ಅದಕ್ಕೆ ನಾನು ಅಮವಾಸ್ಯೆ ಅಂತಾನೇ ಕರೆಯೋದು!

    ಕಲಬುರಗಿ: ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟವಾಗುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾನೆ. ಈ ಮಾತನ್ನು ಯಾರು ಖಂಡಿಸಿಲ್ಲ. ಅವನು ತೇಜಸ್ವಿ ಅಲ್ಲ… ಅವನು ಅಮವಾಸ್ಯೆ… ಹೀಗಾಗಿ ನಾನು ಅವನನ್ನು ಅಮವಾಸ್ಯೆ ಅಂತಾನೆ ಕರೆಯೋದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು.

    ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟವಾಗುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಆಕ್ರೋಶ ಹೊರ ಹಾಕಿದ ಸಿದ್ದರಾಮಯ್ಯ, ಓರ್ವ ಸಂಸದನಾಗಿ ಇಂತಹ ಹೇಳಿಕೆ ನೀಡುತ್ತಾನೆ ಎಂದಾದರೆ ಇದು ಬಿಜೆಪಿಯ ಆಂತರಿಕ ಚಿಂತನೆಯನ್ನು ತಿಳಿಸುತ್ತದೆ ಎಂದು ಹೇಳಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ನಾನು ಮಣ್ಣಿನ ಮಗ/ರೈತನ ಮಗ ಎಂದು ಬಿ.ಎಸ್‌.ಯಡಿಯೂರಪ್ಪ ಹೇಳುತ್ತಾರೆ. ನಮ್ಮ ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಮಿಷಿನ್ ಇಲ್ಲ. ಹೀಗಾಗಿ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದರು ಎಂದರು.

    ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನರ ಆಶಿರ್ವಾದದಿಂದ ಬಂದ ಸರ್ಕಾರವಲ್ಲ. ಕೋಟಿ ಕೋಟಿ ರೂ. ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಿ ಸರ್ಕಾರ ಮಾಡಿದ್ದಾರೆ. ಇದು ನೈತಿಕವಲ್ಲ…ಅನೈತಿಕ ಸರ್ಕಾರ. ಈವರೆಗೆ ಎಷ್ಟು ಲೂಟಿ ಹೊಡೆದಿದ್ದಾರೆ ಅನ್ನೋದನ್ನು ಹೇಳಲು ಸಾಧ್ಯವಿಲ್ಲ. ಇದು ಅಲಿಬಾಬ ಮತ್ತು ಚಾಲಿಸ್ ಚೋರ್ ಸರ್ಕಾರ ಎಂದು ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶದ ಮಾತಿನ ಮೂಲಕ ಹರಿಹಾಯ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts